Advertisement
ದೇಶ- ವಿದೇಶಗಳಿಂದ ಈ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಕನ್ನಡಿಗರು ಉತ್ಸಾಹದಿಂದ ಮುಂದೆ ಬಂದಿದ್ದು, ಅಕ್ಟೋಬರ್ 28 ರಂದು ಕೋಟಿ ಕಂಠ ಗಳಲ್ಲಿ ಕನ್ನಡದ ವೃಂದ ಗಾಯನ ಮೊಳಗಿ ದಾಖಲೆ ಸೃಷ್ಟಿಯಾಗಲಿದೆ.
Related Articles
Advertisement
ಅಕ್ಟೋಬರ್ ೨೮ರಂದು ಬೆಳಗ್ಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ” , ಹುಯಿಲಗೊಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚಲುವ ಕನ್ನಡನಾಡು, ಡಾ.ಚನ್ನವೀರ ಕಣವಿ ಅವರ “ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ “, ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವಾ “ , ಡಾ.ಡಿ.ಎಸ್.ಕರ್ಕಿಯವರ “ಹಚ್ಚೇವು ಕನ್ನಡದ ದೀಪ “ ಹಾಗೂ ಡಾ. ಹಂಸಲೇಖ ಅವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು “ ಎಂಬ ಆರು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ.
ಎಲ್ಲೆಲ್ಲಿ:
ರಾಜ್ಯ, ಗಡಿನಾಡು, ಸಾಗರೋತ್ತರ ಹೊರತುಪಡಿಸಿ ರಾಜ್ಯದ ಹದಿನೈದು ಸ್ಥಳಗಳಲ್ಲಿ ವಿಶೇಷ ಕಾರ್ತಕ್ರಮ ಆಯೋಜಿಸಲಾಗಿದೆ. ವಿಧಾನಸೌಧದ ಮೆಟ್ಟಿಲು, ಗಾಂಧಿ ಪ್ರತಿಮೆ, ಹೈಕೋರ್ಟ್, ಕಂಠೀರವ ಕ್ರೀಡಾಂಗಣ, ವಿಮಾನ, ರೈಲು, ಚಿತ್ರದುರ್ಗದ ಕೋಟೆ, ಕಡಲ ತೀರಗಳಲ್ಲಿ ಕನ್ನಡದ ಗೀತೆ ಮೊಳಗಲಿದೆ.