Advertisement
ಕಳೆದ ವರ್ಷ ‘ಮಾತಾಡ್ ಮಾತಾಡ್ ಕನ್ನಡ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ‘ಲಕ್ಷಕಂಠ ಗಾಯನ’ಕ್ಕೆ ಈಗಾಗಲೇ ನಾಡಿನಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಹೀಗಾಗಿ ರಾಜ್ಯೋತ್ಸವ ಪ್ರಯುಕ್ತ ಮತ್ತೆ ಈ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೋಟಿ ಕಂಠ ಗಾಯನ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ.
Related Articles
Advertisement
ಈ ಅಭಿಯಾನ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸರಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳು, ತಾಲೂಕು ಕೇಂದ್ರಗಳು, ದೆಹಲಿ ಕನ್ನಡ ಸಂಘ, ಹೊರನಾಡು, ಗಡಿನಾಡ ಸಂಘಗಳ ಕಚೇರಿ, ವಿಧಾನಸೌಧದ ಮೆಟ್ಟಿಲು ಹಾಗೂ ವಿಧಾನಸೌಧ-ವಿಕಾಸ ಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆ ಎದುರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸಮೂಹ ಗಾಯನ ನಡೆಸುವರು.
ಅದೇ ರೀತಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮೆಜೆಸ್ಟಿಕ್ ರೈಲು ನಿಲ್ದಾಣ, ಮೆಟ್ರೋ ನಿಲ್ದಾಣದಲ್ಲೂ ಈ ಐದು ಕನ್ನಡ ಗೀತೆಗಳನ್ನು ಹಾಡುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾಡಿನ ಪ್ರಮುಖ ಪ್ರವಾಸಿ ಸ್ಥಾನಗಳು, ಕೋಟೆಗಳು, ಕಡಲತೀರ, ಐಟಿ ಕಂಪನಿಗಳು, ಆಸ್ಪತ್ರೆ ಹಾಗೂ ಜಿಲ್ಲಾ ಕೇಂದ್ರಗಳಲ್ಲೂ ಕೋಟಿ ಕಂಠ ಗಾಯನ ಅಭಿಯಾನ ನಡೆಯಲಿದ್ದು, ಸಮಸ್ತ ಕನ್ನಡಿಗರು ಅಭಿಮಾನ ಪೂರ್ವಕವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ನಾನು ಮನವಿ ಮಾಡುತ್ತೇನೆ.
ಈ ಕಾರ್ಯಕ್ರಮದಲ್ಲಿ ಕನ್ನಡದ ಪ್ರಮುಖ ಸಾಧಕರು, ಮಠಾಧೀಶರು, ಸಾಹಿತಿಗಳು, ಕವಿಗಳು, ವಿದ್ಯಾರ್ಥಿ ಸಂಘಟನೆಗಳೂ ಭಾಗಿಯಾಗಲಿದ್ದು, ಕನ್ನಡದ ಅಸ್ಮಿತೆಯ ಅನಾವರಣ ಕಾರ್ಯದಲ್ಲಿ ತಾವೆಲ್ಲರೂ ಭಾಗಿಯಾಗುವಂತೆ ಕೋರುತ್ತೇನೆ ಎಂದು ಹೇಳಿದ್ದಾರೆ.