Advertisement
ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಾಂತವಾದ ವಾತಾವರಣದಲ್ಲಿ ಭಗವಂತನ ಸಾನ್ನಿಧ್ಯವನ್ನು ಕಾಣುತ್ತೇವೆ. ಅಲ್ಲಿ ಚೈತನ್ಯ ಜಾಗೃತಿಯಾಗುತ್ತದೆ. ಶ್ರೀಕ್ಷೇತ್ರದ ವತಿಯಿಂದ ಸುಮಾರು 350 ಪುರಾತನ ದೇಗುಲಗಳ ಪುನರ್ನಿರ್ಮಾಣ ಮಾಡಲಾಗುತ್ತಿದೆ. ಸದ್ಭಾವನೆಯಿಂದ ಭಗವಂತನನ್ನು ಪೂಜಿಸಿದಲ್ಲಿ ಶ್ರೇಯಸ್ಸಾಗುವುದು ಎಂದರು.
Related Articles
Advertisement
ವ್ಯವಸ್ಥಾಪನ ಸಮಿತಿ ಸದಸ್ಯ ನೇರಂಬಳ್ಳಿ ರಾಘವೇಂದ್ರ ರಾವ್ ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಗೋಪಾಡಿ ಶ್ರೀನಿವಾಸ ರಾವ್ ಪ್ರಸ್ತಾವಿಸಿದರು. ನಟಿ, ನಿರೂಪಕಿ ಅಪರ್ಣಾ ಎನ್. ನಿರೂಪಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಸುರೇಶ ಬೆಟ್ಟಿನ್ ವಂದಿಸಿದರು.
ಪುರ ಮೆರವಣಿಗೆ, ಪೂರ್ಣಕುಂಭ ಸ್ವಾಗತಡಾ| ಹೆಗ್ಗಡೆ ಮತ್ತು ಸೋದೆ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರನ್ನು ರಥಬೀದಿಯಿಂದ ದೇಗುಲದ ವರೆಗೆ ಸಾಲಂಕೃತ ವಾಹನದಲ್ಲಿ ಕುಳ್ಳಿರಿಸಿ, ಭಕ್ತರ ಸಮ್ಮುಖದಲ್ಲಿ ಪುರ ಮೆರವಣಿಗೆಯಲ್ಲಿ ಕರೆತರಲಾಯಿತು. ಶ್ರೀ ಕೋಟಿಲಿಂಗೇಶ್ವರ ದೇಗುಲಕ್ಕೆ ತೆರಳಿದ ಅವರು ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ. ಪ್ರಭಾಕರ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ, ಬ್ರಹ್ಮಕಶೋತ್ಸವ ಸಮಿತಿಯ ಅಧ್ಯಕ್ಷ ಗೋಪಾಡಿ ಶ್ರೀನಿವಾಸ ರಾವ್, ಸಮಿತಿಗಳ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.