Advertisement

ಲೋಕಾಪುರದಲ್ಲಿ ಕೊಟ್ಪಾ ದಾಳಿ: 32 ಪ್ರಕರಣ ದಾಖಲು

10:57 AM May 29, 2020 | Suhan S |

ಬಾಗಲಕೋಟೆ: ಜಿಲ್ಲಾ ತಂಬಾಕು ನಿಯಂತ್ರಣ ತಂಡ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿ ನಿಯಮ ಉಲ್ಲಂಘನೆ ಆರೋಪದಡಿ 32 ಪ್ರಕರಣ ದಾಖಲಿಸಲಾಗಿದೆ.

Advertisement

ಲೋಕಾಪುರದಲ್ಲಿ ತಂಬಾಕು ಉತ್ಪನ್ನಗಳ ಸಗಟು ಹಾಗೂ ಚಿಲ್ಲರೆ ಮಾರಾಟಗಾರರ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರ ವಿರುದ್ಧ ಒಟ್ಟು 32 ಪ್ರಕರಣ ದಾಖಲಿಸಿ ಒಟ್ಟು 2 ಸಾವಿರ ರೂ.ಗಳ ದಂಡ ವಿಧಿಸಿದೆ. ತಂಬಾಕು ಉತ್ಪನ್ನಗಳ ಮಾರಾಟ ಮಾರಾಟಗಾರರಿಗೆ ತಮ್ಮ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಫಲಕ ಹಾಕಲು ತಿಳಿಸಲಾಯಿತು.

ಸಿಗರೇಟ್‌, ಬೀಡಿಗಳನ್ನು ಬಿಡಿ ಬಿಡಿಯಾಗಿ ಮಾರಾಟ ಮಾಡಬಾರದು ಹಾಗೂ ತಂಬಾಕು ಉತ್ಪನ್ನಗಳ ಬಗ್ಗೆ ಗೋಡೆ ಬರಹ, ಹೋರ್ಡಿಂಗ್ಸ್‌ ದೃಶ್ಯಹಾಗೂ ಮುದ್ರಣ ಮಾಧ್ಯಮದ ಮೂಲಕ ತಂಬಾಕು ಉತ್ಪನ್ನಗಳ ಜಾಹೀರಾತು ಮಾಡಬಾರದೆಂದು ಕರಪತ್ರ ನೀಡುವ ಮೂಲಕ ತಿಳಿಹೇಳಿದರು.  ಸೆಕ್ಷನ್‌ 6 (ಬಿ) ಕಾಯ್ದೆ ಅನುಸಾರ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ 100 ಗಜ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ.

ಉಲ್ಲಂಘನೆಯಾದರೆ ದಂಡ ಹಾಗೂ ಸೆರೆವಾಸ ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು. ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದಿಂದ ಜಿಲ್ಲಾ ತಂಬಾಕು ಸಲಹೆಗಾರರಾದ ಶಶಿಕಾಂತ ಕುಮಠಳ್ಳಿ, ಶಿವಲಿಂಗ ಕರಗಣ್ಣಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next