Advertisement

ಕೊಟ್ಟಿಗೆಹಾರ: ಅಕ್ರಮ ಕಳ್ಳಬಟ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ

01:53 PM Sep 29, 2022 | Team Udayavani |

ಕೊಟ್ಟಿಗೆಹಾರ: ಬಾಳೂರು ಠಾಣಾ ವ್ಯಾಪ್ತಿಯ ಮಲೆಮನೆ ಎಂಬಲ್ಲಿ ಬಾಳೂರು ಪೊಲೀಸರು ಅಕ್ರಮ ಕಳ್ಳ ಬಟ್ಟಿ ಅಡ್ಡೆ ಮೇಲೆ ದಾಳಿ ನಡೆಸಿದ್ದು, ಕಳ್ಳ ಬಟ್ಟಿ ಹಾಗೂ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

Advertisement

ಖಚಿತ ಮಾಹಿತಿ ಮೇರೆಗೆ ಬಾಳೂರು ಠಾಣಾಧಿಕಾರಿ ಪವನ್ ಹಾಗೂ ಸಿಬ್ಬಂದಿ ಮಲೆ ಮನೆ ಗ್ರಾಮದ ಸುರೇಶ ಎಂಬವರು ಕಳ್ಳಬಟ್ಟಿ ತಯಾರಿಸುತ್ತಿದ್ದ ವೇಳೆ ದಾಳಿ ನಡೆಸಿದ್ದು, 200 ಲೀಟರ್ ಬೆಲ್ಲದ ಕೊಳೆ ಹಾಗೂ ಎರಡು ಲೀಟರ್ ಕಳ್ಳಬಟ್ಟಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಪವನ್ ಕುಮಾರ್ ಸಿಬ್ಬಂದಿಗಳಾದ ರಾಜೇಂದ್ರ, ಜಾಫರ್, ಅಭಿಲಾಶ್, ಪ್ರದೀಪ್, ವಸಂತ್, ಸತೀಶ್, ಮೊದಲಾದವರು ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next