Advertisement

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

05:39 PM May 21, 2024 | Team Udayavani |

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಬಣಕಲ್ -ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ.

Advertisement

ಮೃತಪಟ್ಟ ಆಟೋ ಚಾಲಕ ಬಾಳೂರು ಹೋಬಳಿಯ ಮಲೆಮನೆ ರವಿ(28) ಎಂದು ಗುರುತಿಸಲಾಗಿದೆ.

ಬಣಕಲ್-ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುತ್ತಿರುವಾಗ ನಿಯಂತ್ರಣ ತಪ್ಪಿ ಆಟೋ ಪಲ್ಟಿ ಹೊಡೆದ ಪರಿಣಾಮ ಚಾಲಕ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡರೆನ್ನಲಾಗಿದೆ. ತಕ್ಷಣವೇ ಅವರನ್ನು ಪ್ರಥಮ ಚಿಕಿತ್ಸೆ ಬಣಕಲ್ ಆಸ್ಪತ್ರೆಯಲ್ಲಿ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೂಡಿಗೆರೆ ಸರಕಾರಿ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

          
Advertisement

Udayavani is now on Telegram. Click here to join our channel and stay updated with the latest news.

Next