Advertisement
ಬೆಳ್ಳಿಗ್ಗೆ ಆರಂಭವಾಗುತ್ತಿದ್ದಂತೆ ಸ್ವಲ್ಪ ತಣ್ಣಗಿದ್ದ ಬಿಸಿಲ ತಾಪ ಮಧ್ಯಾಹ್ನವಾಗುತ್ತಿದ್ದಂತೆ ಬಿಸಿಲಿನ ಪ್ರಖರತೆ ತೀವ್ರವಾಗಿ ಜನರು ಹೊರಗೆ ಕಾಲಿಟ್ಟರೆ ಬಿಸಿಲ ತೀವ್ರತೆ ತಲೆಯ ನೆತ್ತಿ ಸುಡುತ್ತಿದೆ.
Related Articles
Advertisement
ಜನರು ಮಜ್ಜಿಗೆ, ದಾಕ್ಷಿ, ಸೇಬು, ಪೇರಳೆ, ಪರಂಗಿ ಹಣ್ಣು, ಕಲ್ಲಂಗಡಿ, ಕಬ್ಬಿನ ಹಾಲು, ಪುನರ್ಪುಳಿ ಪಾನೀಯ, ಎಳನೀರು ಜ್ಯೂಸ್ ಮುಂತಾದ ಕಡೆ ಹೆಚ್ಚಿನ ಒಲವು ತೋರುತ್ತಿದ್ದು, ತಂಪು ಪಾನೀಯಗಳಿಗೂ ಬೇಡಿಕೆ ಹೆಚ್ಚಿದಂತಾಗಿದೆ. ಎಳನೀರಿಗೆ 35 ರೂ., ಜ್ಯೂಸ್ ಗೆ 35-40 ರೂ., ಇತರೆ ಜ್ಯೂಸ್ ಗಳಿಗೆ 60 ರೂ. ವರೆಗೂ ಇದೆ.
ಸುಡು ಬಿಸಿಲಿನಿಂದ ಹಣ್ಣಿನ ಜ್ಯೂಸ್ ಗೂ ಬೆಲೆ ಏರಿಕೆಯಾಗಿದೆ. ಮಳೆಯಿಲ್ಲದೇ ಬಿಸಿಲಿಗೆ ಕಾಫಿ ಮತ್ತಿತರ ಗಿಡಗಳು ಒಣಗುತ್ತಿವೆ. ಸುತ್ತಮುತ್ತಲಿನ ನದಿಗಳೂ ಕೂಡ ಬಿಸಿಲಿಗೆ ನೀರು ಒಣಗಿ ಹಲವು ಕಡೆ ಬತ್ತಿವೆ. ಈ ಬಾರಿ ಬಿಸಿಲಿನ ಬೇಗೆಯಿಂದ ಬರಗಾಲದಂತೆ ಭಾಸವಾಗುತ್ತಿದೆ. ಹಲವೆಡೆ ಕುಡಿಯುವ ನೀರಿನ ಸೌಲಭ್ಯಕ್ಕೂ ಸಂಚಕಾರವಿದೆ. ನೀರಿನ ಆಸರೆಗೆ ಪ್ರವಾಸಿಗರು ಬಾಟಲಿ ನೀರಿಗೆ ಮೊರೆ ಹೋಗುವಂತಾಗಿದೆ. ಜಾನುವಾರುಗಳು ಕೂಡ ಬಾಯಾರಿಕೆಗೆ ಹೈರಾಣಾಗುತ್ತಿವೆ. ಬಿಸಿಲಿನ ತಾಣಕ್ಕೆ ಹುಲ್ಲು ಕೂಡ ಒಣಗುತ್ತಿದ್ದು, ಜಾನುವಾರು ಮೇವಿಗೂ ತೊಂದರೆಯಾಗುತ್ತಿದೆ.
ಸುಡು ಬಿಸಿಲಿಗೆ ಹೆಂಚಿನ ಮನೆಯ ಜನರು ಸ್ವಲ್ಪ ಮಟ್ಟಿಗೆ ತಂಪಾಗಿದ್ದರೂ ಸ್ಲ್ಯಾಬ್ ಮನೆಗಳಲ್ಲಿ ಜನರು ಒಳಗೆ ಕೂರಲು ಆಗದೆ ಸಂಜೆಯ ವಾತಾವರಣ ಯಾವಾಗ ಮೂಡುತ್ತೋ ಎಂದು ಪರಿತಪಿಸುವಂತಾಗಿದೆ.
ಮಲೆನಾಡಿನಲ್ಲಿ ಮೇ ಮತ್ತು ಏಪ್ರಿಲ್ ಮಾಸದಲ್ಲಿ ವಾಡಿಕೆಯಷ್ಟು ಹಿಂಗಾರಿನ ಮಳೆಯಾಗುತ್ತಿದ್ದು ಈ ಬಾರಿ ಒಂದು ಬಾರಿ ಮಾತ್ರ ಹಗುರದಿಂದ ಸಾಮಾನ್ಯ ಮಳೆಯಾಗಿದ್ದು ವಾಡಿಕೆಯಷ್ಟು ಮಳೆಯಾಗದೇ ಇದರಿಂದ ಬಿಸಿಲಿನ ತಾಪ ಏರಿಕೆಯಾಗುತ್ತಿದೆ.ಕಾಫಿ ತೋಟಗಳಲ್ಲಿ ಮರಕಸಿ,ಕಾಡುಮರಗಳ ನಾಶ, ಜಾಗತಿಕ ತಾಪಮಾನ, ನಗರೀಕರಣದಂತಹ ಕಾರಣಗಳಿಂದಾಗಿ ಮಲೆನಾಡಿನಂತಹ ಭಾಗದಲ್ಲೂ ಮಳೆಯ ಅಭಾವ ಉಂಟಾಗಿ ತಾಪಮಾನ ಏರಿಕೆಗೆ ಕಾರಣವಾಗಿದೆ ಎನ್ನುತ್ತಾರೆ ಹಲವು ಪರಿಸರ ಪ್ರಿಯರು. ಈ ಬಾರಿ ಬೇಸಿಗೆಯ ಸುಡು ಬಿಸಿಲು ಜನರನ್ನ ಕಂಗಾಲುಗೊಳಿಸಿದೆ.ಕಾಫಿ ಬೆಳೆಗಾರರು ನೀರಿನ ಕೊರತೆಯಿಂದ ತೋಟಕ್ಕೆ ನೀರಾಯಿಸಲು ಆಗದೆ ಸಂಕಷ್ಟ ಎದುರಿಸುವಂತಾಗಿದೆ. –ಸಂಜಯ್ ಗೌಡ, ಕೊಟ್ಟಿಗೆಹಾರ ಸಂತೋಷ್ ಅತ್ತಿಗೆರೆ, ಕೊಟ್ಟಿಗೆಹಾರ