Advertisement

Kottigehara: ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಕ್ಕೆ ಯುವಕನಿಗೆ ಹಲ್ಲೆ

03:55 PM May 26, 2023 | Team Udayavani |

ಕೊಟ್ಟಿಗೆಹಾರ: ಮುಸ್ಲಿಂ ಮಹಿಳೆ ಮನೆಗೆ ಹೋಗಿದ್ದ ಎಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ಮೇ. 26 ರಂದು ನಡೆದಿದೆ.

Advertisement

ಅಜಿತ್ ಎಂಬ ಯುವಕನ ಮೇಲೆ ದಾಳಿ ನಡೆದಿದ್ದು, ಐದಕ್ಕೂ ಹೆಚ್ಚು ಜನರು ಹಲ್ಲೆ ನಡೆಸಿರುವುದಾಗಿ ಗಾಯಾಳು ಅಜಿತ್ ಆರೋಪಿಸಿದ್ದಾರೆ.

ಸುಹೇಬ್ ಸೇರಿದಂತೆ ಹಲವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅಜಿತ್ ಆರೋಪಿಸಿದ್ದಾರೆ.

ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದಿರೋ ಅಜಿತ್, ಕಾಂಗ್ರೆಸ್ ಸರ್ಕಾರ, ಎಂಎಲ್ಎ ಬಂದ್ಮೇಲೆ ಈ ರೀತಿ ಆಗುತ್ತಿದೆ ಎಂದಿದ್ದಾರೆ. ಸದ್ಯ ಮೂಡಿಗೆರೆ ಆಸ್ಪತ್ರೆಯಲ್ಲಿ ಅಜಿತ್ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದಿರುವ ಅಜಿತ್, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ರೀತಿ ಆಗುತ್ತಿದೆ ಎಂದಿದ್ದಾರೆ. ಸದ್ಯ ಹಲ್ಲೆಗೊಳಗಾದ ಅಜಿತ್‌ ಮೂಡಿಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next