ಕೊಟ್ಟಿಗೆಹಾರ: ಕಾಲೇಜು ಬಸ್ಸು ಹಾಗೂ ಗ್ಯಾಸ್ ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಸ್ಸಿನ ಚಾಲಕ ಗಂಭೀರ ಗಾಯಗೊಂಡ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ73ರ ಮೂಡಿಗೆರೆ ತಾಲೂಕಿನ ಚಕ್ ಮಕ್ಕಿ ಬಳಿ ಸಂಭವಿಸಿದೆ.
ಉಡುಪಿಯಿಂದ ಚಿಕ್ಕಮಗಳೂರು ಕಡೆಗೆ ದಂತ ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸು ಹಾಗೆ ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಸಿಲಿಂಡರಿನ ಲಾರಿ ನಡುವೆ ಅಪಘಾತ ಸಂಭವಿಸಿದೆ.
ಗಂಭೀರ ಗಾಯಗೊಂಡ ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Related Articles
ಇದನ್ನೂ ಓದಿ : ಕುಷ್ಟಗಿ: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಬೈಕ್; ಬಾಲಕ ದುರ್ಮರಣ