Advertisement

ಕೊಟ್ಟಿಗೆಹಾರ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

08:59 AM Sep 19, 2022 | Team Udayavani |

ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬಾನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಇಂಪಾ ಜೆ. ಎಂ. ಗೆ ಈ ಬಾರಿಯ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ದೊರಕಿದೆ. ಇವರು ಈ ಶಾಲೆಯಲ್ಲಿ ಸತತ ಹದಿನಾರು ವರ್ಷಗಳಿಂದ ತಮ್ಮ ಸೇವೆ ಸಲ್ಲಿಸುತ್ತಿದ್ದು, ಹದಿಮೂರು ವರ್ಷಗಳ ಕಾಲ ಸಹ ಶಿಕ್ಷಕಿಯಾಗಿ, ಕಳೆದ ಮೂರು ವರ್ಷಗಳಿಂದ ಪ್ರಭಾರಿ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Advertisement

ಯಾವುದೇ ಖಾಸಗಿ ಶಾಲೆಗಿಂತಲೂ ಕಮ್ಮಿಯಿಲ್ಲದಂತೆ ಅಭಿವೃದ್ಧಿ ಪಡಿಸಿರುವುದರಿಂದ ಮಕ್ಕಳ ದಾಖಲಾತಿಯಲ್ಲಿಯೂ ಮೂಡಿಗೆರೆ ತಾಲೂಕಿನ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿಯೇ ಮುಂದಿರುವುದು ಮಾತ್ರವಲ್ಲ, ಇಲ್ಲಿಯ ಮಕ್ಕಳು ಪ್ರತಿಭಾ ಕಾರಂಜಿಯಂತಹ ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಪಲ್ಗುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅತ್ಯುತ್ತಮ ಶಾಲೆಯಾಗಿದ್ದು‌, ಇಂತಹ ಶಾಲೆಯ ಶಿಕ್ಷಕಿಗೆ ಪ್ರಶಸ್ತಿ ಬಂದಿರುವುದು ಪ್ರಾಮಾಣಿಕತೆಗೆ ಸಿಕ್ಕ ಪ್ರತಿಫಲ. ಇಲ್ಲಿ ವಿದ್ಯಾರ್ಥಿಗಳಿಗೆ ಇಬ್ಬರು ಶಿಕ್ಷಕಿಯರು ಇರುವುದರಿಂದ ಇನ್ನೊಬ್ಬರನ್ನು ಸರ್ಕಾರ ನೇಮಿಸಿದರೆ, ಈ ಶಾಲೆ ರಾಜ್ಯ ಮಟ್ಟದಲ್ಲಿ ಅತ್ಯುತ್ತಮ ಶಾಲೆಯಾಗಿ ಗುರುತಿಸಿಕೊಳ್ಳಬಹುದು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next