Advertisement

ಕೋವಿಡ್ 19: ಆತಂಕ ದೂರ ಮಾಡಿ

04:19 PM Mar 21, 2020 | Suhan S |

ಚಿಕ್ಕಬಳ್ಳಾಪುರ: ಕೋವಿಡ್ 19 ವೈರಸ್‌ ಬಗ್ಗೆ ಜನರಲ್ಲಿರುವ ಆತಂಕ ದೂರ ಮಾಡುವ ನಿಟ್ಟಿನಲ್ಲಿ ಹಾಗೂ ಸೋಂಕು ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಿದೆ ಎಂದು ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್‌ ತಿಳಿಸಿದರು.

Advertisement

ನಗರದ ಹಳೆ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಸೋಂಕಿತರಿಗೆ ಚಿಕಿತ್ಸೆಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಾಪಿಸಲಾಗಿರುವ ಐಸೊಲೇಷನ್‌ ವಾರ್ಡ್‌ಗಳಿಗೆ ಶುಕ್ರವಾರ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ 19 ವೈರಸ್‌ ಸೋಂಕು ಪತ್ತೆಯಾಗಿಲ್ಲ ಎಂದರು.

ಕೋವಿಡ್ 19 ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಭಾಗದಲ್ಲಿ ಗ್ರಾಪಂಗಳ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಸಾರ್ವಜನಿಕರು ಸಹ ಸ್ವತ್ಛತೆಗೆ ಒತ್ತು ಕೊಡಬೇಕೆಂದರು.

ಜನತೆ ಆದಷ್ಟು ಜನಸಂದಣಿ ಪ್ರದೇಶಗಳಿಂದ ಅಂತರ ಕಾಯ್ದುಕೊಳ್ಳಬೇಕು, ಪೌಷ್ಟಿಕ ಆಹಾರ ಸೇವಿಸಬೇಕು. ಮಕ್ಕಳ ಹಾಗೂ ವಯೋವೃದ್ಧ ಹಿರಿಯ ನಾಗರಿಕರ ಆರೋಗ್ಯದ ಬಗ್ಗೆ ಗಮನ ಹರಿಸಬೇಕೆಂದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯೋಗೇಶ್‌ಗೌಡ, ತಾಲೂಕು ವೈದ್ಯಾಧಿಕಾರಿ ಡಾ.ಮಂಜುಳಾ, ಆರೋಗ್ಯ ಇಲಾಖೆ ಜಿ.ಹರೀಶ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next