Advertisement

ನಾಳೆ ಪಿಯು ಪರೀಕ್ಷೆ ನಡೆಯುವುದು ಪಕ್ಕಾ ; ಮಕ್ಕಳಿಗೆ ಸಾರಿಗೆ ವ್ಯವಸ್ಥೆ ಇದೆ

05:31 PM Mar 22, 2020 | Hari Prasad |

ಬೆಂಗಳೂರು: ರಾಜ್ಯಾದ್ಯಂತ ನಡೆಯುತ್ತಿರುವ ಪದವಿ ಪೂರ್ವ ಪರೀಕ್ಷೆಗಳನ್ನು ಮುಂದೂಡದಿರಲು ರಾಜ್ಯ ಸರಕಾರ ತೀರ್ಮಾನಿಸಿದೆ. ಈ ಪ್ರಕಾರವಾಗಿ ನಾಳೆ ನಡೆಯಲಿರುವ ಅಂತಿಮ ಪರೀಕ್ಷೆ ನಿಗದಿಯಂತೆ ನಡೆಯಲಿದೆ.

Advertisement

ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆಯಾಗಿರುವ 9 ಜಿಲ್ಲೆಗಳ ಸಹಿತ ಎಲ್ಲಾ ಕಡೆಗಳಲ್ಲಿಯೂ ಪಿ.ಯು. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಚಿತಪಡಿಸಿದ್ದಾರೆ.

ರಾಜ್ಯಾದ್ಯಂತ ನಾಳೆಯೂ ಪ್ರಯಾಣಿಕರ ವಾಹನ ಸಂಚಾರ ನಿಷೇಧಗೊಂಡಿರುವುದರಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂಡರೆಯಾಗದಂತೆ ವಿಶೇಷ ಬಸ್ ಸೌಲಭ್ಯವನ್ನು ಕಲ್ಪಿಸಲು ವ್ಯವಸ್ಥೆ ಮಾಡುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ.

ಮಾಸ್ಕ್ ಧರಿಸುವುದೂ ಸೇರಿದಂತೆ ಸೂಕ್ತ ಮುಂಜಾಗರೂಕತಾ ಕ್ರಮಗಳೊಂದಿಗೆ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಪಿ.ಯು. ಪರೀಕ್ಷಾ ಮಂಡಳಿ ಸೂಚನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next