Advertisement

ಕೊಳ್ನಾಡು ಗ್ರಾ.ಪಂ. ದ್ವೀತೀಯ ಸುತ್ತಿನ ಗ್ರಾಮಸಭೆ 

03:06 PM Jan 24, 2018 | Team Udayavani |

ಕೊಳ್ನಾಡು: ಕೊಳ್ನಾಡು ಗ್ರಾ.ಪಂ. ವ್ಯಾಪ್ತಿಯಲ್ಲಿ ಪಾರದರ್ಶಕ ಆಡಳಿತ ನೀಡುವ ಉದ್ದೇಶದಿಂದ ಅದಕ್ಕೆ ಪೂರಕವಾಗುವ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ವಿಶೇಷ ಮುತುವರ್ಜಿಯಲ್ಲಿ ಆರೋಗ್ಯ ಕೇಂದ್ರ, ಪಶು ಆಸ್ಪತ್ರೆ, ಸೇತುವೆ, ಸಂತೆ ಮಾರುಕಟ್ಟೆ, ಮೀನು ಮಾರುಕಟ್ಟೆ ಕಟ್ಟಡಗಳು, ರಸ್ತೆಗಳು ಅಭಿವೃದ್ಧಿ ಹೊಂದಿವೆ ಎಂದು ಕೊಳ್ನಾಡು ಗ್ರಾ.ಪಂ. ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಹೇಳಿದರು.

Advertisement

ಅವರು ಮಂಗಳವಾರ ಕೊಳ್ನಾಡು ಗ್ರಾ.ಪಂ.ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ದ್ವಿತೀಯ ಸುತ್ತಿನ ಗ್ರಾಮಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನೀರಿನ ಸಮಸ್ಯೆ ಇಲ್ಲ
ಜಿ.ಪಂ. ಸದಸ್ಯ ಎಂ.ಎಸ್‌. ಮಹಮ್ಮದ್‌ ಅವರು ಕೂಡಾ ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ಈ ಭಾಗದಲ್ಲಿ ನೀರಿನ ಸಮಸ್ಯೆ ಮಾಯವಾಗಿದೆ. ಮುಂದಿನ ದಿನಗಳಲ್ಲಿ
ಗ್ರಾ.ಪಂ. 25 ಲಕ್ಷ ರೂ. ಆದಾಯ ಗಳಿಸುವ ಗುರಿ ಇಟ್ಟುಕೊಂಡಿದೆ. ಇದರಿಂದ ಗ್ರಾಮ ಇನ್ನಷ್ಟು ಅಭಿವೃದ್ಧಿ
ಹೊಂದಲಿದೆ ಎಂದರು.

ಗ್ರಾ.ಪಂ. ಸದಸ್ಯರ ಜಾಗಗಳು ರೋಡ್‌ ಮಾರ್ಜಿನ್‌ನಲ್ಲಿ ಇದ್ದರೂ ಮನೆ ನಿರ್ಮಿಸಲು ಅನುದಾನ ಬಿಡುಗಡೆಗೊಳ್ಳು
ತ್ತದೆ. ಸಾಮಾನ್ಯ ಜನರಿಗೆ ಮಾತ್ರ ಕಾನೂನು ತೊಡಕು ಇದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ ಎಂಬ ಆರೋಪಕ್ಕೆ
ಉತ್ತರಿಸಿದ ಕಂದಾಯ ಅಧಿಕಾರಿ, ಈ ಬಗ್ಗೆ ಅರ್ಜಿ ಬಂದಿದೆ. ಆದರೆ ಇದುವರೆಗೂ ಯಾರಿಗೂ ಮಂಜೂರಾತಿಯಾಗಿಲ್ಲ
ಎಂದು ಸ್ಪಷ್ಟನೆ ನೀಡಿದರು. ಈ ಸಂದರ್ಭ ಮಧ್ಯೆ ಪ್ರವೇಶಿಸಿದ ಅಧ್ಯಕ್ಷರು, ದಾಖಲೆ ಇಲ್ಲದೇ ಯಾವ ಆರೋಪವನ್ನೂ
ಮಾಡಬಾರದು. ವ್ಯಕ್ತಿಗಳ ಮಾನಹಾನಿ ಮಾಡಿ, ಅವರ ಗೌರವ ಧಕ್ಕೆ ತರಬಾರದು. ಸಮರ್ಪಕ ದಾಖಲೆ ಇದ್ದಲ್ಲಿ
ಹಾಜರುಪಡಿಸಬೇಕು ಎಂದು ಹೇಳಿದರು. 

ಪಲ್ಸ್‌ ಪೋಲಿಯೋ ವಿಚಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿಗಳು ಹಬ್ಬುತ್ತಿವೆ. ಈ ಬಗ್ಗೆ ಆರೋಗ್ಯ ಇಲಾಖೆ ಗಮನ ಹರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ಪಂಚಾಯತ್‌ರಾಜ್‌ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ ನರೇಂದ್ರ ಬಾಬು ಅವರು ನೋಡಲ್‌ ಅಧಿಕಾರಿಯಾಗಿ ಭಾಗವಹಿಸಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿದರು. ತಾ.ಪಂ. ಸದಸ್ಯ ಕುಲ್ಯಾರು ನಾರಾಯಣ ಶೆಟ್ಟಿ, ಗ್ರಾ.ಪಂ. ಉಪಾಧ್ಯಕ್ಷೆ ಯಮುನಾ ಲಕ್ಷ್ಮಣ ಗೌಡ, ಅಭಿವೃದ್ಧಿ ಅಧಿಕಾರಿ ಸುಧೀರ್‌, ಕಾರ್ಯದರ್ಶಿ ರಮೇಶ್‌ ಮೊದಲಾದವರು ಭಾಗವಹಿಸಿದ್ದರು.

Advertisement

ಸಮಸ್ಯೆಗಳಿದ್ದಲ್ಲಿ ಗ್ರಾ.ಪಂ. ಗಮನಕ್ಕೆ ತನ್ನಿ
ವೈದ್ಯಾಧಿಕಾರಿಗಳು ಸಂಪರ್ಕಕ್ಕೆ ಸಿಗುತ್ತಿಲ್ಲ. ಆಸ್ಪತ್ರೆಯಲ್ಲಿ ಬೆಡ್‌ ವ್ಯವಸ್ಥೆ ಇಲ್ಲ ಎಂಬ ಗ್ರಾಮಸ್ಥರ ಮನವಿಗೆ ಉತ್ತರಿ
ಸಿದ ಅಧ್ಯಕ್ಷರು, ಅಧಿಕಾರಿಗಳು ಲೋಪ ದೋಷ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು. 
ಇಂತಹ ಸಮಸ್ಯೆಗಳನ್ನು ಗ್ರಾಮಸ್ಥರು ಗ್ರಾ.ಪಂ. ಗಮನಕ್ಕೆ ತರಬೇಕು. ಆಸ್ಪತ್ರೆಗೆ ಕಟ್ಟಡದ ಕೊರತೆಯಿದ್ದು, ನೂತನ
ಕೇಂದ್ರದ ಕಾರ್ಯ ನಡೆಯುತ್ತಿದೆ ಬಳಿಕ ಸಮಸ್ಯೆ ನಿವಾರಣೆಯಾಗಲಿದೆ ಎಂದು ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next