Advertisement

ಕೆ.ಪಿ.ನಂಜುಂಡಿ ಬಿಜೆಪಿ ರಾಜ್ಯ ಉಪಾಧ್ಯಕ್ಷ

03:45 AM Jul 03, 2017 | Team Udayavani |

ಬೆಂಗಳೂರು: ಇತ್ತೀಚೆಗೆ ತಾನೇ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ವಿಶ್ವಕರ್ಮ ಸಮುದಾಯದ ಮುಖಂಡ ಕೆ.ಪಿ.ನಂಜುಂಡಿ ಅವರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

Advertisement

ನಂಜುಂಡಿ ಅವರನ್ನು ಉಪಾಧ್ಯಕ್ಷರಾಗಿ ನೇಮಕ ಮಾಡಿರುವ ಯಡಿಯೂರಪ್ಪ ಅವರು, ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲಾ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸು ಹೆಚ್ಚಿಸುವಲ್ಲಿ ಸತತ ಶ್ರಮಿಸಬೇಕು ಎಂದು ಆಶಿಸಿದ್ದಾರೆ.

ನಂಜುಂಡಿ ಅವರು ಬಿಜೆಪಿ ಸೇರಿದ ಸಂದರ್ಭದಲ್ಲಿ ಅವರಿಗೆ ಪಕ್ಷದಲ್ಲಿ ಜವಾಬ್ದಾರಿಯುತ ಸ್ಥಾನ ನೀಡುವುದಾಗಿ ಯಡಿಯೂರಪ್ಪ ಭರವಸೆ ನೀಡಿದ್ದರು. ಅದರಂತೆ ಈಗ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next