Advertisement
ಇದು ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೆ ಕೆಪಿಸಿಸಿ ನೀಡಿರುವ “ಚುನಾವಣಾ ಟಾಸ್ಕ್’ ಆಗಿದೆ. ಇದರ ಜೊತೆಗೆ ಆಕಾಂಕ್ಷಿಗಳಿಗೆ ಒಗ್ಗಟ್ಟಿನ ಮಂತ್ರವನ್ನೂ ಹೇಳಿ ಕೊಡಲಾಗಿದೆ.
ಮುಖ್ಯವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಚಿಲುಮೆ ಎಂಬ ಖಾಸಗಿ ಸಂಸ್ಥೆ ಮತದಾರರ ಮಾಹಿತಿಯನ್ನು ಕಲೆ ಹಾಕಿರುವ ಹಗರಣ ಬೆಳಕಿಗೆ ಬಂದಿದೆ. ಇದೇ ರೀತಿಯಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ನಡೆದಿರುವ ಬಗ್ಗೆ ಅನುಮಾನಗಳು ಕೇಳಿ ಬರುತ್ತಿವೆ. ಆದ್ದರಿಂದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳು ಮೊದಲು ಕ್ಷೇತ್ರದ ಮತದಾರರ ಪಟ್ಟಿ ಬಗ್ಗೆ ಎಚ್ಚರಿಕೆ ವಹಿಸಿ. ಪಟ್ಟಿಗೆ ಸೇರಿಸಿದ, ತೆಗೆದು ಹಾಕಲಾದ ಹೆಸರುಗಳ ಬಗ್ಗೆ ಪ್ರತಿ ಬೂತ್ ಮಟ್ಟದಲ್ಲೂ ಪರಿಶೀಲಿಸಿ, ನಮೂನೆ 7 ಇಲ್ಲದೆ ಹೆಸರು ತೆಗೆದು ಹಾಕಲಾಗಿದೆಯೇ ಎಂಬ ಬಗ್ಗೆ ಮಾಹಿತಿ ಪಡೆಯಬೇಕು. ತಪ್ಪುಗಳು ಅಥವಾ ಅನುಮಾನಗಳು ಕಂಡು ಬಂದಲ್ಲಿ ತಕ್ಷಣ ಜಿಲ್ಲಾಧಿಕಾರಿಗಳಿಗೆ ದೂರು ಕೊಡಬೇಕು. ಈ ವಿಚಾರವನ್ನು ಪಕ್ಷದ ರಾಜ್ಯ ಘಟಕದ ಗಮನಕ್ಕೆ ತರಬೇಕು ಎಂದು ಆಕಾಂಕ್ಷಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
Related Articles
Advertisement
“ಜೂಮ್ ಆ್ಯಪ್’ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಸಂಸದ ಡಿ.ಕೆ. ಸುರೇಶ್, ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್, ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಕೆ.ಜೆ ಜಾರ್ಜ್ ಸೇರಿದಂತೆ ಹಲವು ಶಾಸಕರು, ಮಾಜಿ ಶಾಸಕರು ಹಾಗೂ ಟಿಕೆಟ್ ಆಕಾಂಕ್ಷಿಗಳು ಭಾಗವಹಿಸಿದ್ದರು.