Advertisement

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

01:00 PM Jan 02, 2025 | Team Udayavani |

ದಾವಣಗೆರೆ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಕೇವಲ ರಾಜಕೀಯ ದ್ವೇಷದಿಂದ ಆರೋಪ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ದೂರಿದರು.

Advertisement

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ ಖರ್ಗೆಯವರ ಯಾವುದೇ ಪಾತ್ರ ಇಲ್ಲ. ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಬರೆದಿರುವ ಡೆತ್ ನೋಟ್ ನಲ್ಲೂ ಹೆಸರಿಲ್ಲ. ಆದರೂ, ಅವರು ದಲಿತರು ಎಂಬ ಕಾರಣಕ್ಕಾಗಿ ಹಾಗೂ ಪ್ರಿಯಾಂಕ ಖರ್ಗೆಯವರು ಆರ್ ಎಸ್ ಎಸ್, ಬಿಜೆಪಿಯವರಿಗೆ ಸಿಂಹಸ್ವಪ್ನ. ಹಾಗಾಗಿಯೇ ಪ್ರಿಯಾಂಕ ಖರ್ಗೆಯವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಾಸ್ತವವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರರೇ ಅಲ್ಲ. ಉತ್ತರ ಕರ್ನಾಟಕ ಭಾಗದವರು ಗುತ್ತಿಗೆದಾರರಾಗಲು ಧಾರವಾಡದಲ್ಲಿನ ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಅಧೀಕ್ಷಕರ ಕಚೇರಿಯಲ್ಲಿ ನೋಂದಣಿ ಮಾಡಿಸಬೇಕು‌. ಸಚಿನ್ ಎಲ್ಲಿಯೂ ನೋಂದಣಿ ಮಾಡಿಸಿಲ್ಲ. ಹಾಗಾಗಿ ಅವರು ಗುತ್ತಿಗೆದಾರ ಅಲ್ಲ ಎಂಬುದು ಗೊತ್ತಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಏನೇ ಪ್ರಕರಣ ನಡೆದರೂ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಹೋರಾಟ ಮಾಡುತ್ತಾರೆ. ಸಿಬಿಐನವರು ಏನಾದರೂ ಬಿಜೆಪಿಯ ನೆಂಟರಾ ಎಂದು ಲೇವಡಿ ಮಾಡಿದ ಅವರು ಬಿಜೆಪಿ ಒಂಭತ್ತು ವರ್ಷಗಳ ಕಾಲ ರಾಜ್ಯದಲ್ಲಿ ಅಧಿಕಾರ ನಡೆಸಿದರೂ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ವಹಿಸಲಿಲ್ಲ ಎಂದು ದೂರಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಉಚ್ಚ ನ್ಯಾಯಾಲಯದಲ್ಲಿ ಪೋಕ್ಸೋ ಪ್ರಕರಣದ ವಿಚಾರಣೆ ನಡೆಯುತ್ತಿ ರುವಾಗ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ರಾಗಿ ಮುಂದುವರಿಯುತ್ತಿದ್ದಾರೆ. ವಿಜಯೇಂದ್ರ ಮತ್ತು ಯತ್ನಾಳ್ ವಿರುದ್ಧ ನಡೆಯುತ್ತಿರುವ ಮುಸುಕಿನ ಗುದ್ದಾಟ ಮುಚ್ಚಿ ಹಾಕಲು ಪ್ರಿಯಾಂಕ ಖರ್ಗೆಯವರ ಮುಖಕ್ಕೆ ಮಸಿ ಬಳಿಯಲು ಷಡ್ಯಂತ್ರ ಮಾಡುತ್ತಿದ್ದಾರೆ. ಪ್ರಿಯಾಂಕ ಖರ್ಗೆಯವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜೀನಾಮೆ ಸ್ವೀಕರಿಸಬಾರದು ಎಂದು ಒತ್ತಾಯಿಸಿದರು.

Advertisement

ಬಿಜೆಪಿಯವರಿಗೆ ದಲಿತರು ಎಂದರೆ ಆಗುವು ದೇ ಇಲ್ಲ. ಹಾಗಾಗಿ ಪ್ರಿಯಾಂಕ ಖರ್ಗೆಯವರ ವಿರುದ್ಧ ಹೋರಾಡಲು ಬಿಜೆಪಿಯವರು ಟೂಲ್ ಕಿಟ್ ಸಿದ್ಧಪಡಿಸಿದ್ದಾರೆ. ಸಚಿನ್ ಆತ್ಮಹತ್ಯೆ ಪ್ರಕರಣ ಸಂಬಂಧಿಸಿದಂತೆ ಪ್ರಿಯಾಂಕ ಖರ್ಗೆ ರಾಜೀನಾಮೆ ಕೊಡುವ ಅಗತ್ಯವೇ ಇಲ್ಲ‌. ರಾಜೀನಾಮೆ ನೀಡದೆ ಮುಂದುವರಿಯಬೇಕು ಎಂದರು.

ಕೆ.ಎಂ. ಮಂಜುನಾಥ್, ಲಿಯಾಖತ್ ಅಲಿ, ಗುರು ರೇವಣಕರ್, ಪ್ರಭಾಕರ್, ಬಿ.ಎಚ್. ಉದಯ್ ಕುಮಾರ್, ಡಿ. ಶಿವಕುಮಾರ್ ಇತರರು ಇದ್ದರು.

ಇದನ್ನೂ ಓದಿ: Dense Fog… ರಸ್ತೆ ಕಾಣದೆ ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್, 10 ಮಂದಿಯ ಸ್ಥಿತಿ ಗಂಭೀರ

Advertisement

Udayavani is now on Telegram. Click here to join our channel and stay updated with the latest news.

Next