Advertisement

ಕೆಪಿಸಿಸಿ ಸಭೆಯಲ್ಲಿ ನಿರ್ಧಾರ: ರಾಜ್ಯ ಸರಕಾರದ ವಿರುದ್ಧ ಹೋರಾಟ ತೀವ್ರ

02:43 AM Sep 28, 2020 | Hari Prasad |

ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ.

Advertisement

ರಾಜ್ಯ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಕರ್ನಾಟಕದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ರಣದೀಪ್‌ ಸುರ್ಜೇವಾಲ ಅವರು ರವಿವಾರ ಕೆಪಿಸಿಸಿ ಸದಸ್ಯರೊಂದಿಗೆ ಸಭೆ ನಡೆಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಭೆ ಜರಗಿದ್ದು, ರಾಜ್ಯ ಸರಕಾರದ ವೈಫ‌ಲ್ಯಗಳ ವಿರುದ್ಧ ನಿರಂತರ ಹೋರಾಟ ಮಾಡಬೇಕು. ಬಿಜೆಪಿ ವಿರುದ್ಧದ ಹೋರಾಟಗಳನ್ನು ಕಾಂಗ್ರೆಸ್‌ ಬೆಂಬಲಿಸಬೇಕು. ಸರಕಾರದ ಜನ ವಿರೋಧಿ ನೀತಿಗಳನ್ನು ಜನರ ಮುಂದಿಟ್ಟು ಪಕ್ಷ ಸಂಘಟನೆ ಹಾಗೂ ಸದಸ್ಯತ್ವ ಹೆಚ್ಚಳಕ್ಕೆ ಒತ್ತುಕೊಡಬೇಕೆಂದು ತೀರ್ಮಾನಿಸಲಾಯಿತು.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಮಾತನಾಡಿ, ದೇಶದಲ್ಲಿ ಕೋವಿಡ್ತಾಂ ಡವವಾಡುತ್ತಿದೆ. ಆದರೆ, ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ವೈದ್ಯಕೀಯ ಉಪಕರಣ ಹಗರಣ, ಬಡವರಿಗೆ ತಲುಪಬೇಕಾದ ಹಣ ಲೂಟಿ ಸಹಿತ ಯಡಿಯೂರಪ್ಪ ಕುಟುಂಬ ಭ್ರಷ್ಟಾಚಾರದಲ್ಲಿ ನಿರತವಾಗಿದೆ. ಇದರ ಬಗ್ಗೆ ಧ್ವನಿ ಎತ್ತಿ ನಿರಂತರ ಹೋರಾಟ ಮಾಡಬೇಕು ಎಂದರು.

ಕಾಂಗ್ರೆಸ್‌ ಪರ ಜನಭಿಪ್ರಾಯ: ಸಿದ್ದು
ರಾಜ್ಯದಲ್ಲಿ ಬಿಜೆಪಿ ಸರಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದು, ಕಾಂಗ್ರೆಸ್‌ ಆಡಳಿತ ಚೆನ್ನಾಗಿತ್ತು ಎನ್ನುವ ಅಭಿಪ್ರಾಯ ಜನರಲ್ಲಿ ಮೂಡುತ್ತಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಲಕ್ಷಣಗಳು ಕಾಣಿಸುತ್ತಿವೆ ಎಂದು ವಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ರಾಜ್ಯ ಸರಕಾರ ರೈತರು ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಕಾರ್ಮಿಕರನ್ನು ಕಡೆಗಣಿಸಿ ಕಾರ್ಖಾನೆಗಳ ಪರವಾಗಿ ಕಾಯ್ದೆ ತಿದ್ದುಪಡಿ ಮಾಡಿದೆ. ಇದರ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. ರೈತರು ಮತ್ತು ಕಾರ್ಮಿಕರ ಪರ ಪಕ್ಷ ದನಿ ಎತ್ತಬೇಕಿದೆ.
– ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭಾ ಸದಸ್ಯ.

Advertisement

Udayavani is now on Telegram. Click here to join our channel and stay updated with the latest news.

Next