Advertisement
ಬೆಳಗಾವಿ ಗಲಾಟೆ ಕೆಪಿಸಿಸಿ ಕಚೇರಿಯಿಂದ ಕುಮಾರಕೃಪ ಅತಿಥಿಗೃಹಕ್ಕೆ ಶಿಫ್ಟ್ ಆಗಿ ಶಾಸಕಿ ಲಕ್ಷ್ಮಿ ಹೆಬ್ಟಾಳ್ಕರ್ ಅವರನ್ನು ಕೆಪಿಸಿಸಿ ಕಚೇರಿಯಲ್ಲೇ ಇರುವಂತೆ ಸೂಚಿಸಿ, ಸಚಿವ ರಮೇಶ್‌ಜಾರಕಿಹೊಳಿ ಅವರನ್ನು ಕೆಕೆ ಗೆಸ್ಟ್ ಗೌಸ್‌ಗೆ ಕರೆದು ವೇಣುಗೋಪಾಲ್ ಮಾತುಕತೆ ನಡೆಸಿದರು. ಲಕ್ಷ್ಮಿ ಹೆಬ್ಟಾಳ್ಕರ್ ಅವರ ಜತೆಗೂ ಪ್ರತ್ಯೇಕ ಮಾತುಕತೆ ನಡೆಸಿದರು. ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೂ ಮಾಜಿ ಸಚಿವ ಸತೀಶ್ ಜಾರಕೊಹೊಳಿ ಗೈರು ಹಾಜರಾಗಿ ಸಭೆಯಿಂದ ದೂರ ಉಳಿದಿದ್ದರು. ಈ ಮೂಲಕ ಹೈಕಮಾಂಡ್ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದರು.
Related Articles
ಸಚಿವ ಡಿ.ಕೆ.ಶಿವಕುಮಾರ್ ಬೆಳಗಾವಿ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದು ಚರ್ಚೆಗೆ ಗ್ರಾಸವಾಯಿತು. ಲಕ್ಷ್ಮಿ ಹೆಬ್ಟಾಳ್ಕರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗುಂಪಿನ ನಡುವೆ ವಾಗ್ವಾದ ಹೆಚ್ಚಾಗಿ ಪರಿಸ್ಥಿತಿ ಕೈ ಮೀರುವ ಹಂತ ತಲುಪಿದ್ದರಿಂದ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಕಚೇರಿಗೆ ಆಗಮಿಸಿದರು. ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಉಸ್ತುವಾರಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರೊಂದಿಗೆ ಬೆಳಗಾವಿ ಸಮಸ್ಯೆ ಬಗೆಹರಿಸಲು ರಾಜಿ ಸಂಧಾನ ಮಾತುಕತೆ ಕಸರತ್ತು ಸಹ ನಡೆಯಿತು. ಆದರೆ, ಇದ್ಯಾವುದೂ ಫಲ ಕೊಡದ ಕಾರಣ ಬೆಳಗಾವಿ ಸಭೆ ಮುಂದೂಡಲಾಯಿತು.
Advertisement
ಬೆಳಗಾವಿ ಕೈ ಸಮಸ್ಯೆ ಕೆಪಿಸಿಸಿ ಅಧ್ಯಕ್ಷರು ನೋಡಿಕೊಳ್ಳುತ್ತಾರೆ ಕಾಂಗ್ರೆಸ್ ಬೆಳಗಾವಿ ಜಿಲ್ಲಾ ಘಟಕದಲ್ಲಿ ಉಂಟಾಗಿರುವ ಸಂಘರ್ಷದ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ಗಮನಹರಿಸಲಿದ್ದು, ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನ ಗೊಂದಲ ಪಕ್ಷದ ಆಂತರಿಕ ವಿಚಾರವಾಗಿದ್ದು, ಪಕ್ಷದ ಅಧ್ಯಕ್ಷರೇ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ವಿವಾದ ಬಗೆಹರಿಸಲಾಗುವುದು ಎಂದು ತಿಳಿಸಿದರು. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಲಕ್ಷ್ಮೀ ಹೆಬ್ಟಾಳ್ಕರ್ ಶುಕ್ರವಾರ ತಮ್ಮನ್ನು ಭೇಟಿಯಾಗಿದ್ದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಭೇಟಿಗೂ ವಿವಾದಕ್ಕೂ ಸಂಬಂಧ ಇಲ್ಲ. ಸ್ಥಳೀಯ ಸಂಸ್ಥೆ ಮೀಸಲಾತಿ ಕುರಿತಂತೆ ಚರ್ಚಿಸಲು ಅವರು ಬಂದಿದ್ದರು ಎಂದು ಹೇಳಿದರು.