Advertisement
ಕೆಪಿಸಿಸಿಗೆ ನೂತನವಾಗಿ ಅಧ್ಯಕ್ಷರಾಗಿ ನೇಮಕಗೊಂಡ ದಿನವೇ ವಿಧಾನಸಭೆಯ ಮೊಗಸಾಲೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದ್ದರು. ಆದರೂ, ಭಾನುವಾರ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ಹಿರಿಯ ನಾಯಕ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಇನ್ನೋರ್ವ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಮನೆಗಳಿಗೆ ತೆರಳಿ ಅಭಿನಂದನೆ ಸಲ್ಲಿಸಿದ್ದಾರೆ.
Related Articles
Advertisement
ಖರ್ಗೆ ಸಲಹೆ ಅಗತ್ಯಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗಲು ಸಿದ್ದರಾಮಯ್ಯ ಬಣ ವಿರೋಧ ವ್ಯಕ್ತಪಡಿಸಿದಾಗ ಮೂಲ ಕಾಂಗ್ರೆಸ್‌ನ ಕೆಲವು ನಾಯಕರು ತಾವೇ ಅಧ್ಯಕ್ಷ ಗಾದಿಗೇರಲು ಕಸರತ್ತು ನಡೆಸಿದಾಗ ಮಲ್ಲಿಕಾರ್ಜುನ ಖರ್ಗೆಯವರು ಡಿ.ಕೆ.ಶಿವಕುಮಾರ್ ಪರವಾಗಿ ಹೈಕಮಾಂಡ್ ಮಟ್ಟದಲ್ಲಿ ಲಾಬಿ ಮಾಡಿದ್ದರು ಎನ್ನಲಾಗಿದೆ. ಅದೇ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಮುಂದಿನ ದಿನಗಳಲ್ಲಿಯೂ ತಮ್ಮ ಹೋರಾಟಕ್ಕೆ ಅವರ ಸಹಕಾರ ಹಾಗೂ ಆಶೀರ್ವಾದ ಅಗತ್ಯ ಎನ್ನುವ ಕಾರಣಕ್ಕೆ ಅವರನ್ನೂ ಭೇಟಿ ಮಾಡಿ ಚರ್ಚಿಸಿದ್ದಾರೆ. ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಇನ್ನೋರ್ವ ಹಿರಿಯ ದಲಿತ ನಾಯಕ ಕೆ.ಎಚ್.ಮುನಿಯಪ್ಪ ಅವರನ್ನೂ ಭೇಟಿ ಮಾಡಿ, ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಪಕ್ಷದ ನಾಯಕರ ಭೇಟಿಯ ಸಂದರ್ಭದಲ್ಲಿ ಅವರೊಂದಿಗೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಜೊತೆಗಿದ್ದರು.