Advertisement

21ರಂದು ಕೆಪಿಸಿಸಿ ಪದಾಧಿಕಾರಿಗಳ ಸಭೆ

07:00 AM Jul 19, 2018 | |

ಬೆಂಗಳೂರು: ಲೋಕಸಭೆ ಚುನಾವಣೆಗೆ ಸಿದಟಛಿತೆ ಆರಂಭಿಸಿರುವ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಜುಲೈ 21ರಂದು ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿಗಳ ಅಧ್ಯಕ್ಷರ ಸಭೆ ಕರೆದಿದ್ದಾರೆ.

Advertisement

ಸಭೆಯಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಪಾಲ್ಗೊಳ್ಳಲಿದ್ದು, ಮುಂದಿನ ಚುನಾವಣೆಗೆ ತಳ ಮಟ್ಟದಿಂದ ಪಕ್ಷ ಸಂಘಟನೆ ಮಾಡುವ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಸಭೆಯ ನಂತರ ಕೆಪಿಸಿಸಿ ಪದಾಧಿಕಾರಿಗಳನ್ನು ಪುನಾರಚಿಸುವ ಬಗ್ಗೆಯೂ ದಿನೇಶ್‌ ಗುಂಡೂರಾವ್‌ ತೀರ್ಮಾನಿಸಿದ್ದು, ಕೆಲವರನ್ನು ಕೈ ಬಿಟ್ಟು ಹೊಸ ಪದಾಧಿಕಾರಿಗಳ ನೇಮಕ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next