ಬೆಂಗಳೂರು: ಬಿಜೆಪಿ ಜನಸೇವಕ ಸಮಾವೇಶದಲ್ಲಿ ಕಾಂಗ್ರೆಸ್ ದೇಶಕ್ಕೆ ಮಾರಕ ಎಂದು ಯಡಿಯೂರಪ್ಪ ಹೇಳಿದ್ದಾರೆ. ಪಾಪ ಅವರಿಗೆ ಅವರ ಪಕ್ಷದಲ್ಲಿರುವವರ ಇತಿಹಾಸ ಗೊತ್ತಿಲ್ಲ. ಏಳು ಜನ್ಮ ಎತ್ತಿದರೂ ಕಾಂಗ್ರೆಸ್ ಮುಕ್ತ ರಾಜ್ಯ ಮಾಡಲಾಗದು ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕರು ಹೇಳಿರುವ ಸಿಡಿ ವಿಚಾರವು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಎಂದರೆ ಭಾರತೀಯ ಜನತಾ ಪಾರ್ಟಿ ಅಲ್ಲ, ‘ಬ್ಲಾಕ್ ಮೇಲರ್ಸ್ ಜನತಾ ಪಾರ್ಟಿ’ ಇದನ್ನು ಬಿಜೆಪಿ ನಾಯಕರೇ ಹೇಳಿದ್ದಾರೆ ಎಂದು ಡಿಕೆಶಿ ಆರೋಪಿಸಿದರು.
ಇದನ್ನೂ ಓದಿ:ಹಣೆಯಲ್ಲಿ ಬರೆದಿದ್ದರೆ ಸಚಿವ ಸ್ಥಾನ ಸಿಗುತ್ತದೆ, ಇಲ್ಲಾಂದ್ರೆ ಇಲ್ಲ: ಮುನಿರತ್ನ
ಕೋವಿಡ್ ಸಂಕಷ್ಟದ ಸಮಯದಲ್ಲಿ ನಗರ ಸ್ಥಳೀಯ ಸಂಸ್ಥೆಯಲ್ಲಿ ತೆರಿಗೆ ಹಾಕುವ ಕಾನೂನು ತಂದಿರುವುದು ಜನರ ಸುಲಿಗೆ ಮಾಡುವ ಕ್ರಮ. ತಿಂಗಳಲ್ಲಿ ಮೂರು ಬಾರಿ ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆ ಆಗಿದೆ ಇವುಗಳನ್ನು ವಿರೋಧಿಸಿ ದೊಡ್ಡ ಪ್ರಮಾಣದ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.
ರೈತರಿಗೆ ಶಕ್ತಿ ತುಂಬಲು ಬೃಹತ್ ಕಾರ್ಯಕ್ರಮ ಕಾಂಗ್ರೆಸ್ ಹಮ್ಮಿಕೊಂಡಿದ್ದು ಜ. 20 ರಂದು ರಾಜಭವನ ಮುತ್ತಿಗೆ ಹಾಕಲಿದ್ದೇವೆ ಎಂದರು.