ಕಲಬುರಗಿ: ಬಿಜೆಪಿ ಶಾಸಕರೇ ಪ್ರಸ್ತಾಪಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸಿಡಿ ವಿಚಾರ ಅಧಿವೇಶನದಲ್ಲಿ ಚರ್ಚಿಸುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕಾಂಗ್ರೆಸ್ ಪಕ್ಷದ ವಿಭಾಗೀಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಸಿಡಿಯ ಬಗ್ಗೆ ಅನೇಕ ವಿಚಾರ ನನಗೂ ಗೊತ್ತು. ಹೀಗಾಗಿ ಅದನ್ನೆಲ್ಲಾ ಅಧಿವೇಶನ ಸಂದರ್ಭದಲ್ಲಿ ನೋಡೋಣ ಎಂದು ಹೇಳಿದರು.
ಇದನ್ನೂ ಓದಿ:ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು
ಅಮಿತ್ ಶಾಗೆ ತಿರುಗೇಟು: ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರ ಡಬಲ್ ಇಂಜಿನ್ ಹೇಳಿಕೆಗೆ ತಿರುಗೇಟು ನೀಡಿದ ಡಿಕೆ ಶಿವಕುಮಾರ್, ಮಹಾದಾಯಿ ವಿಚಾರದಲ್ಲಿ ಈ ಡಬಲ್ ಇಂಜಿನ್ ಏನು ಮಾಡಿದೆ? ಉತ್ತರ ಕರ್ನಾಟಕಕ್ಕೆ ಈ ಸರ್ಕಾರದಲ್ಲಿ ಅನ್ಯಾಯವಾಗಿದೆ ಎನ್ನುವ ಭಾವನೆ ಇದೆ. ಕಲ್ಯಾಣ ಕರ್ನಾಟಕ ಜನ ಸಹ ತೀವ್ರ ಅನ್ಯಾಯವಾಗಿದೆ ಎನ್ನುತ್ತಿದ್ದಾರೆ. ಹಾಗಾದರೆ ಈ ಡಬಲ್ ಇಂಜಿನ್ ಸಾಧನೆ ಏನು ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಮಹಾರಾಷ್ಟ್ರ ಮುಖ್ಯಮಂತ್ರಿ ಅವರು ತಮ್ಮ ಅಭಿಪ್ರಾಯ ತಿಳಿಸಿರಬಹುದು. ನೆಲ-ಜಲ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಗಟ್ಟಿ ನಿರ್ಧಾರ ಹೊಂದಿದೆ. ಮಹಾರಾಷ್ಟ್ರದಲ್ಲಿ ಅವರ ಜೊತೆ ಹೊಂದಾಣಿಕೆ ಮಾಡಿಕೊಂಡಿರಬಹುದು. ಆದರೆ ನಾಡಿನ ನೆಲ ಜಲ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ ವರದಿಯೇ ಅಂತಿಮ ಎಂದು ಪುನರುಚ್ಚರಿಸಿದರು.