ಕೊಲ್ಲೂರು: ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ರವಿವಾರ ಬೆಳಿಗ್ಗೆ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದರು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಯು. ಆರ್. ಸಭಾಪತಿ, ಜಿಲ್ಲಾಧ್ಯಕ್ಷ ಅಶೋಕ ಕೊಡವೂರು, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ್, ಜಿಲ್ಲಾಧ್ಯಕ್ಷೆ ಗೀತಾ ವಾಗ್ಲೆ, ಉಪಾಧ್ಯಕ್ಷ ರಾಜು ಪೂಜಾರಿ, ತಾ. ಪಂ. ಸದಸ್ಯೆ ಗ್ರೀಷ್ಮ ಬಿಡೆ, ಮಾಜಿ ಸದಸ್ಯ ರಮೇಶ್ ಗಾಣಿಗ, ಉಡುಪಿ ಹಾಗೂ ಮಂಗಳೂರು, ಬೈಂದೂರು, ವಂಡ್ಸೆ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ಅಮೀನ್, ಮಿಥುನ್ ರೈ, ಪ್ರದೀಪ್ ಕುಮಾರ್ ಶೆಟ್ಟಿ, ಶೇಖರ್ ಪೂಜಾರಿ ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.
ಅವರು ಇಂದು ಬೆಳಗ್ಗೆ 11ಕ್ಕೆ ಉಡುಪಿ ಬಾಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ನಡೆಯಲಿರುವ “ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ’ದಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ:‘ಪ್ರವಾದಿಗಳಿಗೆ ಕೋಪ ಬಂದರೆ ಒಂದೇ ಶಿಕ್ಷೆ’: ಮಂಗಳೂರಿನಲ್ಲಿ ಮತ್ತೆ ವಿವಾದಾತ್ಮಕ ಗೋಡೆ ಬರಹ
ಶನಿವಾರ ರಾತ್ರಿ ಶ್ರೀ ಕ್ಷೇತ್ರ ಕಮಲಶಿಲೆಗೆ ಭೇಟಿ ನೀಡಿದ್ದ ಡಿ ಕೆ ಶಿವಕುಮಾರ್ ದೇವಿಯ ದರ್ಶನ ಪಡೆದರು. ಈ ವೇಳೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕರಾದ ಯು.ಆರ್. ಸಭಾಪತಿ, ಗೋಪಾಲ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.