ಬೆಂಗಳೂರು: ಇಡಿ ನೋಟಿಸ್ ಮತ್ತು ಪಕ್ಷದ ಸಭೆಗಳಲ್ಲಿ ಭಾಗಿಯಾಗುವ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ಹೊರಟಿದ್ದಾರೆ.
ಇದಕ್ಕೂ ಮೊದಲು ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ನಮ್ಮ ಪಕ್ಷದ ಸಭೆಯಿದೆ. ಭಾರತ ಜೋಡು ಅಭಿಯಾನದ ಬಗ್ಗೆ ಸಭೆಯಿದೆ. ಇನ್ನೂ ಹಲವಾರು ವಿಚಾರಗಳು ಅಲ್ಲಿ ಚರ್ಚೆಯಾಗುತ್ತದೆ ಎಂದರು.
ಇಡಿ ಕೇಸ್ ಇದೆ, ನನಗೆ ನೋಟಿಸ್ ಕೊಟ್ಟಿದ್ದಾರೆ. ಒಂದನೇ ತಾರೀಕು ವಿಚಾರಣೆಗೆ ಹಾಜರಾಗಬೇಕಿದೆ, ಅದಕ್ಕೆ ಈಗ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡಿಕೆಶಿ ಹೇಳಿದರು.
ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಬಗ್ಗೆ ಕೇಳಿದ ಪ್ರಶ್ನೆಗೆ, ಅವನ್ನೆಲ್ಲ ಹೇಳುಲಾಗುವುದಿಲ್ಲ. ಸಮಯ ಸಿಕ್ಕರೆ ಭೇಟಿಯಾಗುತ್ತೇನೆ ಎಂದು ಉತ್ತರಿಸಿದರು.
Related Articles
ಇದನ್ನೂ ಓದಿ:ಸುಳ್ಯ-ಮಡಿಕೇರಿ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ: ಆತಂಕದಲ್ಲಿ ಜನತೆ!
ಡಿಕೆ ಶಿವಕುಮಾರ್ ಅವರು ಇಂದು ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.