Advertisement

ಮೃತರ ಕುಟುಂಬಗಳಿಗೆ ಕೇಂದ್ರ ಸರ್ಕಾರದಿಂದ ಭಾರೀ ದ್ರೋಹ

09:38 AM Jun 22, 2021 | Team Udayavani |

ದಾವಣಗೆರೆ: ಕೋವಿಡ್‌ ಸಾವಿಗೆ ಪರಿಹಾರವಿಲ್ಲವೆಂದು ತಿಳಿಸುವ ಮೂಲಕ ಕೇಂದ್ರ ಸರ್ಕಾರ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ದ್ರೋಹ ಬಗೆದಿದೆ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್‌ ಆರೋಪಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೋವಿಡ್‌ -19 ಸಾಂಕ್ರಾಮಿಕವನ್ನು ರಾಷ್ಟ್ರೀಯ ವಿಪತ್ತು ಎಂದು ಈ ಹಿಂದೆ ಕೇಂದ್ರ ಸರ್ಕಾರವೇ ಘೋಷಿಸಿದೆ. ಹಾಗಾಗಿ ಕೋವಿಡ್‌ನಿಂದ ಮೃತಪಟ್ಟ ವರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ. ಪರಿಹಾರ ನೀಡಲು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಕೇಂದ್ರ ಸರ್ಕಾರ, ಪರಿಹಾರ ನೀಡಲಾಗುವುದಿಲ್ಲ ಎಂದು ಸುಪ್ರಿಂ ಕೋರ್ಟ್‌ಗೆ ಪ್ರತಿಕ್ರಿಯೆ ನೀಡಿರುವುದು ಖಂಡನಾರ್ಹ ಎಂದಿದ್ದಾರೆ.

ಭಾರತ ಸರ್ಕಾರದ ಅಂಕಿ- ಅಂಶಗಳ ಪ್ರಕಾರ ಕೋವಿಡ್‌ನಿಂದ ಮೃತಪಟ್ಟ ವರ ಸಂಖ್ಯೆ 3,88,164 ಇದೆ. ತಲಾ ನಾಲ್ಕು ಲಕ್ಷ ರೂ.ದಂತೆ ಪರಿಹಾರ ನೀಡಿದರೆ ಹದಿನೈದು ಸಾವಿರದ ಐದನೂರ ಇಪ್ಪತ್ತಾರು ಕೋಟಿ ಐವತ್ತಾರು ಲಕ್ಷ ರೂ. ಆಗುತ್ತದೆ. ಪ್ರಧಾನಿ ತಮ್ಮ ಹೊಸ ಮನೆ ನಿರ್ಮಾಣಕ್ಕಾಗಿ ಹದಿಮೂರು ಸಾವಿರದ ನಾಲ್ಕುನೂರು ಐವತ್ತು ಕೋಟಿ ಮೊತ್ತ ನಿಗದಿಪಡಿಸಿದ್ದಾರೆ. ತಮ್ಮ ಮನೆ ನಿರ್ಮಾಣವನ್ನು ರದ್ದುಪಡಿಸಿದರೆ ಇದೇ ಹಣದಲ್ಲಿ ಮೃತರ ಕುಟುಂಬದವರೆಲ್ಲರಿಗೂ ನಾಲ್ಕು ಲಕ್ಷದಂತೆ ಪರಿಹಾರ ನೀಡಬಹುದು. ಪ್ರಧಾನಿಯವರು ಕೂಡಲೇ ತಮ್ಮ ಮನೆ ನಿರ್ಮಾಣದ ಯೋಜನೆ ಬಿಟ್ಟು ಮೃತ ಕುಟುಂಬಗಳ ನೆರವಿಗೆ ಬರಲಿ ಎಂದು ಅವರು ಒತ್ತಾಯಿಸಿದ್ದಾರೆ.

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಿಂದ ಕೇಂದ್ರ ಸರ್ಕಾರಕ್ಕೆ ತೆರಿಗೆಯ ರೂಪದಲ್ಲಿ 2.94 ಲಕ್ಷ ಕೋಟಿ ರೂಪಾಯಿ ಆದಾಯ ಕೇವಲ 10 ತಿಂಗಳಲ್ಲಿ ಬಂದಿದೆ. ಹೀಗಿರುವಾಗ ಮೃತರ ಕುಟುಂಬಗಳಿಗೆ 15 ಸಾವಿರ ಕೋಟಿ ರೂ. ನೀಡುವ ವಿಚಾರ ದೊಡ್ಡದೇನಲ್ಲ. ಅದಕ್ಕಾಗಿ ಸರ್ಕಾರ ದೊಡ್ಡ ಮನಸ್ಸು ಮಾಡಬೇಕು. -ಡಿ. ಬಸವರಾಜ್‌, ಕೆಪಿಸಿಸಿ ವಕ್ತಾರ

Advertisement

Udayavani is now on Telegram. Click here to join our channel and stay updated with the latest news.

Next