Advertisement

ಮತದಾರರ ನೋಂದಣಿಯಲ್ಲಿ ಬೋಗಸ್‌: ಲಕ್ಷ್ಮಣ್‌

03:24 PM May 25, 2022 | Team Udayavani |

ಮೈಸೂರು: ದಕ್ಷಿಣ ಪದವೀಧರರ ಕ್ಷೇತ್ರದ ಮತದಾರರ ನೋಂದಣಿಯಲ್ಲಿ ಬೋಗಸ್‌ ನಡೆದಿದ್ದು, 40 ಸಾವಿರ ಮತದಾರರ ವಿಳಾಸ ಸಮರ್ಪಕವಾಗಿಲ್ಲ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಎಂ.ಲಕ್ಷ್ಮಣ್‌ ಆರೋಪಿಸಿದರು.

Advertisement

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ನಡೆಯುತ್ತಿರುವದಕ್ಷಿಣ ಪದವೀಧರರ ಕ್ಷೇತ್ರದಿಂದ 1 ಲಕ್ಷದ 33 ಸಾವಿರ ಮಂದಿಮತದಾರರು ನೋಂದಾಯಿಸಿಕೊಂಡಿದ್ದು, ಇವರಲ್ಲಿ 40 ಸಾವಿರಮಂದಿಯ ವಿಳಾಸ ಅಪೂರ್ಣವಾಗಿದೆ. ಜತೆಗೆ ಸಾಕಷ್ಟು ಮಂದಿಪದವಿ ಶಿಕ್ಷಣವನ್ನೇ ಪೂರೈಸಿಲ್ಲ. ಹೀಗಿದ್ದರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿದೆ ಎಂದು ದೂರಿದರು.

ಈ ಬಗ್ಗೆ ಕೂಡಲೇ ಪರಿಶೀಲನೆ ನಡೆಸುವಂತೆ ಚುನಾವಣಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಒಂದು ವೇಳೆ ಪರಿಶೀಲನೆಗೆ ತಡವಾದರೂ ಚುನಾವಣೆಯನ್ನೇ ಮುಂದೂಡಲಿ. ಆದರೆ, ಬೋಗಸ್‌ ಮತದಾನಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

ಹೈಕೋರ್ಟ್‌ ಮೆಟ್ಟಿಲೇರಲಾಗುವುದು: ಬೋಗಸ್‌ ನೋಂದಣಿ ಮಾಡಿಸುವುದರಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನವರು ನಿಸ್ಸೀಮರು.ಚುನಾವಣಾ ಆಯೋಗ ಬೋಗಸ್‌ ಮತದಾರರ ಪಟ್ಟಿಯನ್ನುಗಂಭೀರವಾಗಿ ಪರಿಗಣಿಸಿ ಲೋಪ ಸರಿಪಡಿಸಬೇಕು. ಇಲ್ಲದಿದ್ದರೆಚುನಾವಣೆಗೆ ತಡೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಲಾಗುವುದು ಎಂದು ಎಚ್ಚರಿಸಿದರು.

ಸಚಿವರ ವಿರುದ್ಧ ದೂರು: ಇಡೀ ದೇಶದಲ್ಲಿ ಸ್ವಯತ್ತ ಸಂಸ್ಥೆಗಳನ್ನು ಬಿಜೆಪಿ ಸರ್ಕಾರ ದುರುಪಯೋಗಪಡಿಸಿಕೊಂಡಿದೆ. ಚುನಾವಣಾಆಯೋಗವೂ ಬಿಜೆಪಿ ಏಜೆನ್ಸಿಯಂತೆ ಕೆಲಸ ಮಾಡುತ್ತಿದೆ. ಬಿಜೆಪಿಚುನಾವಣೆ ನೀತಿ ಸಂಹಿತೆ ಉಲ್ಲಂಘಿಸುವಲ್ಲಿ ಹೆಸರುವಾಸಿಯಾಗಿದೆ.ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ್ನಾರಾಯಣ ಮಂಡ್ಯದಲ್ಲಿಅಧಿಕಾರಿಗಳ ಸಭೆ ನಡೆಸಿ ಬಿಜೆಪಿಗೆ ಮತ ನೀಡುವಂತೆ ಹೇಳಿದ್ದಾರೆ. ಈಬಗ್ಗೆ ಸಚಿವರ ವಿರುದ್ಧ ಕ್ರಮಿನಲ್‌ ಮೊಕದ್ದಮೆ ದಾಖಲಿಸುವಂತೆ ಅಲ್ಲಿನ ಜಿಲ್ಲಾಧಿಕಾರಿಗೆ ದೂರು ನೀಡಲಾಗಿದೆ ಎಂದು ಹೇಳಿದರು.

Advertisement

ನಮ್ಮಲ್ಲಿ ಗೊಂದಲವಿಲ್ಲ: ಪಕ್ಷದ ಅಭ್ಯರ್ಥಿ ಘೋಷಣೆಯಿಂದಾಗಿ ಬಿಜೆಪಿ, ಜೆಡಿಎಸ್‌ನಲ್ಲಿ ಗೊಂದಲ ಉಂಟಾಗಿದೆ. ಅಲ್ಲಿನ ಟಿಕೆಟ್‌ ಆಕಾಂಕ್ಷಿಗಳು ಅಸಮಾಧಾನಗೊಂಡಿದ್ದಾರೆ. ಆದರೆ, ಕಾಂಗ್ರೆಸ್‌ನಲ್ಲಿನಾಲ್ಕು ಜಿಲ್ಲೆಗಳ ಮುಖಂಡರು ಎಂಟು ತಿಂಗಳ ಹಿಂದೆಯೇ ಮಧುಜಿ.ಮಾದೇಗೌಡ ಅವರನ್ನು ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಮಾಡಿದ್ದಾರೆ. ಜೆಡಿಎಸ್‌ನಲ್ಲಿ ಮರಿತಿಬ್ಬೇಗೌಡ ಕಾಂಗ್ರೆಸ್‌ ಬೆಂಬಲಿಸಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ನಗರ ಘಟಕದ ಅಧ್ಯಕ್ಷ ಎಂ.ಮೂರ್ತಿ, ಗ್ರಾಮಾಂತರ ಘಟಕದ ಅಧ್ಯಕ್ಷ ಡಾ. ಬಿ.ಜೆ.ವಿಜಯ್‌ ಕುಮಾರ್‌, ಮುಖಂಡ ಶಿವಣ್ಣ, ನಗರ ಉಪಾಧ್ಯಕ್ಷ ತಿವಾರಿ, ಮಹೇಶ್‌ ಇದ್ದರು.

 

ಮೈಸೂರಿಗೆ ಬಿಜೆಪಿ ಕೊಡುಗೆ ಶೂನ್ಯ: ಶ್ವೇತಪತ್ರ ಹೊರಡಿಸಲು ಮನವಿ :

 

ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ 5 ವರ್ಷದ ಅವಧಿಯಲ್ಲಿ ಮೈಸೂರು ಜಿಲ್ಲೆಗೆ 22 ಸಾವಿರ ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಹೇಳಿದರು.

ಇತ್ತೀಚೆಗೆ ಮೈಸೂರಿಗೆ ಭೇಟಿ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರು, ಮೈಸೂರಿಗೆ ಸಿದ್ದರಾಮಯ್ಯ ಕೊಡುಗೆ ಏನು, ಶ್ವೇತ ಪತ್ರ ಹೊರಡಿಸಲಿ ಎಂದು ಹೇಳಿಕೆ ನೀಡಿರುವುದಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯನವರ ಅವಧಿಯಲ್ಲಿ ಮೈಸೂರು ನಗರಕ್ಕೆ 3800 ಕೋಟಿ ರೂ. ಸೇರಿ ಜಿಲ್ಲೆಗೆ 22 ಸಾವಿರ ಕೋಟಿ ರೂ. ಅನುದಾನಮೀಸಲಿಟ್ಟಿದ್ದಾರೆ. ಆದರೆ, ಮೈಸೂರಿಗೆ ಬಿಜೆಪಿ ಸರ್ಕಾರದ ಕೊಡುಗೆ ಏನು ಎಂಬುದನ್ನು ತಿಳಿಸಲಿ ಎಂದು ಸವಾಲು ಹಾಕಿದರು.

ಮೈಸೂರಿಗೆ 100 ಕೋಟಿ ರೂ. ನೀಡಿರುವ ಬಗ್ಗೆ ಬಿಜೆಪಿಯವರು ಶ್ವೇತಪತ್ರ ಹೊರಡಿಸಲಿ. ಈ ಬಗ್ಗೆ ಕೇಂದ್ರ ಸಚಿವೆ ಶೋಭಾಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌,ಸಂಸದ ಪ್ರತಾಪ್‌ ಸಿಂಹ, ಉಸ್ತುವಾರಿ ಸಚಿವ ಸೋಮಶೇಖರ್‌ ಅವರಿಗೆ ಸವಾಲು ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next