Advertisement

KPCC: ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಬಿ.ಎನ್.‌ ಚಂದ್ರಪ್ಪ ನೇಮಕ

10:50 AM Apr 09, 2023 | Team Udayavani |

ಬೆಂಗಳೂರು: ಮಾಜಿ ಸಂಸದ ಬಿ.ಎನ್.‌ ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

Advertisement

ಮಾಜಿ ಸಂಸದ ಆರ್. ಧ್ರುವನಾರಾಯಣ್‌ ಅವರು ಹೃದಯಾಘಾತದಿಂದ ಇತ್ತೀಚೆಗೆ ನಿಧನರಾದ ಬಳಿಕ ಈ ಸ್ಥಾನ ತೆರವಾಗಿತ್ತು. ಚುನಾವಣೆಯ ತಯಾರಿಯಲ್ಲಿರುವ ಕಾಂಗ್ರೆಸ್‌ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಗೆ ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದೆ.

ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಬಿ.ಎನ್.‌ ಚಂದ್ರಪ್ಪ ಅವರನ್ನು ಕಾರ್ಯಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಈ ಆದೇಶ ತಕ್ಷಣದಿಂದಲೇ ಜಾರಿ ಮಾಡುವಂತೆ ಎಐಸಿಸಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next