Advertisement

ಪರಿಷತ್‌ ಚುನಾವಣೆ: ಬಿಜೆಪಿ ಗರ್ವಭಂಗ, ಜೆಡಿಎಸ್‌ಗೆ ಮುಖಭಂಗ

07:18 PM Dec 17, 2021 | Team Udayavani |

ಬೆಂಗಳೂರು: ಕಾಂಗ್ರೆಸ್‌ ಮುಳುಗುತ್ತಿರುವ ಹಡಗು, ವಿಧಾನಪರಿಷತ್‌ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದಿಲ್ಲ ಎಂದು ಗರ್ವದಿಂದ ಮಾತನಾಡುತ್ತಿದ್ದ ಬಿಜೆಪಿಗೆ ಚುನಾವಣಾ ಫ‌ಲಿತಾಂಶ ಗರ್ವಭಂಗ ತಂದಿದೆ. ಅದೇ ರೀತಿ ಹಳೇ ಮೈಸೂರು ಭಾಗ ನಮ್ಮದು ಎಂದು ಬೀಗುತ್ತಿದ್ದ ಜೆಡಿಎಸ್‌ಗೆ ಮುಖಭಂಗವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧೃವನಾರಾಯಣ್‌ ಹೇಳಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌, ಇತರೆ ಪಕ್ಷಗಳಿಗಿಂತ ಹೆಚ್ಚಿನ ಪ್ರಮಾಣದ ಮತಗಳನ್ನು ಪಡೆದಿದೆ. ಕಾಂಗ್ರೆಸ್‌ಗೆ 44,225 ಮತಗಳನ್ನು ಪಡೆದರೆ, ಬಿಜೆಪಿ 37,283 ಹಾಗೂ ಜೆಡಿಎಸ್‌ 10,249 ಪಡೆದಿದೆ.

ಹೀಗಾಗಿ ಎಲ್ಲ ಮತದಾರರಿಗೆ ಕೆಪಿಸಿಸಿ ವತಿಯಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಗ್ರಾಮಪಂಚಾಯ್ತಿ ಚುನಾವಣೆ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಕಾಂಗ್ರೆಸ್‌ ಪಕ್ಷಕ್ಕಿಂತ ಬಿಜೆಪಿ 45 ಸಾವಿರ ಮತಗಳನ್ನು ಹೆಚ್ಚಾಗಿ ಪಡೆದಿದೆ ಎಂದು ಹೇಳಿದ್ದರು. ಆದರೆ ಈ ಚುನಾವಣೆ ಅವರ ಹೇಳಿಕೆ ಸುಳ್ಳು ಎಂದು ಸಾಬೀತಾಗಿದೆ ಎಂದರು.

ಇದನ್ನೂ ಓದಿ:ಹಿರಿಯ ಕಾಂಗ್ರೆಸ್ಸಿಗ, ಮಾಜಿ ಕೇಂದ್ರ ಸಚಿವ ಜಾಲಪ್ಪ ನಿಧನ

ಕಾಂಗ್ರೆಸ್‌ನಿಂದ ಮಾತ್ರ ಬಸವಣ್ಣನ ತತ್ವ ಪಾಲನೆ
ಸಾಮಾಜಿಕ ನ್ಯಾಯಕ್ಕೆ ಬದ್ಧತೆ ಇರುವುದು ಕೇವಲ ಕಾಂಗ್ರೆಸ್‌ಗೆ ಮಾತ್ರ. ಈ ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರು, ಮಹಿಳೆಯರು, ಹಿಂದುಳಿದವರು ಹಾಗೂ ಮುಂದುವರಿದವರಿಗೆ ಅವಕಾಶ ನೀಡಿದೆ.

Advertisement

ಬಿಜೆಪಿಯವರು ತೋರಿಕೆಗೆ ಸಾಮಾಜಿಕ ನ್ಯಾಯ ಎನ್ನುತ್ತಾರೆ. ಆದರೆ ಒಂದು ಸ್ಥಾನವನ್ನು ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತ, ಮಹಿಳೆಯರಿಗೆ ನೀಡಿಲ್ಲ. ಬಸವಣ್ಣನವರ ಅನುಭವ ಮಂಟಪವನ್ನು ಕಾಂಗ್ರೆಸ್‌ನಲ್ಲಿ ಮಾತ್ರ ನೋಡಲು ಸಾಧ್ಯ. ಬಸವಣ್ಣನವರು 650 ವಿವಿಧ ಸಮುದಾಯದ ಜನಪ್ರತಿನಿಧಿಗಳನ್ನು ಕೂರಿಸಿಕೊಂಡು ರಾಜ್ಯಭಾರ ಮಾಡುತ್ತಿದ್ದರು. ಆ ಕಲ್ಪನೆ ಕಾಂಗ್ರೆಸ್‌ನಲ್ಲಿದೆ. ಬಿಜೆಪಿ ಕೇವಲ ಬಸವಣ್ಣನವರ ಫೋಟೋ ಇಟ್ಟುಕೊಳ್ಳುತ್ತಾರೆ. ಅವರ ತತ್ವ ಪಾಲಿಸುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಚಂದ್ರಪ್ಪ, ವಿಧಾನಪರಿಷತ್‌ ಮಾಜಿ ಸದಸ್ಯ ಆರ್‌.ವಿ ವೆಂಕಟೇಶ್‌, ಸೂರಜ್‌ ಹೆಗಡೆ, ರಾಮಚಂದ್ರಪ್ಪ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next