Advertisement
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್, ಇತರೆ ಪಕ್ಷಗಳಿಗಿಂತ ಹೆಚ್ಚಿನ ಪ್ರಮಾಣದ ಮತಗಳನ್ನು ಪಡೆದಿದೆ. ಕಾಂಗ್ರೆಸ್‌ಗೆ 44,225 ಮತಗಳನ್ನು ಪಡೆದರೆ, ಬಿಜೆಪಿ 37,283 ಹಾಗೂ ಜೆಡಿಎಸ್ 10,249 ಪಡೆದಿದೆ.
Related Articles
ಸಾಮಾಜಿಕ ನ್ಯಾಯಕ್ಕೆ ಬದ್ಧತೆ ಇರುವುದು ಕೇವಲ ಕಾಂಗ್ರೆಸ್‌ಗೆ ಮಾತ್ರ. ಈ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರು, ಮಹಿಳೆಯರು, ಹಿಂದುಳಿದವರು ಹಾಗೂ ಮುಂದುವರಿದವರಿಗೆ ಅವಕಾಶ ನೀಡಿದೆ.
Advertisement
ಬಿಜೆಪಿಯವರು ತೋರಿಕೆಗೆ ಸಾಮಾಜಿಕ ನ್ಯಾಯ ಎನ್ನುತ್ತಾರೆ. ಆದರೆ ಒಂದು ಸ್ಥಾನವನ್ನು ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತ, ಮಹಿಳೆಯರಿಗೆ ನೀಡಿಲ್ಲ. ಬಸವಣ್ಣನವರ ಅನುಭವ ಮಂಟಪವನ್ನು ಕಾಂಗ್ರೆಸ್‌ನಲ್ಲಿ ಮಾತ್ರ ನೋಡಲು ಸಾಧ್ಯ. ಬಸವಣ್ಣನವರು 650 ವಿವಿಧ ಸಮುದಾಯದ ಜನಪ್ರತಿನಿಧಿಗಳನ್ನು ಕೂರಿಸಿಕೊಂಡು ರಾಜ್ಯಭಾರ ಮಾಡುತ್ತಿದ್ದರು. ಆ ಕಲ್ಪನೆ ಕಾಂಗ್ರೆಸ್‌ನಲ್ಲಿದೆ. ಬಿಜೆಪಿ ಕೇವಲ ಬಸವಣ್ಣನವರ ಫೋಟೋ ಇಟ್ಟುಕೊಳ್ಳುತ್ತಾರೆ. ಅವರ ತತ್ವ ಪಾಲಿಸುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಚಂದ್ರಪ್ಪ, ವಿಧಾನಪರಿಷತ್ ಮಾಜಿ ಸದಸ್ಯ ಆರ್.ವಿ ವೆಂಕಟೇಶ್, ಸೂರಜ್ ಹೆಗಡೆ, ರಾಮಚಂದ್ರಪ್ಪ ಉಪಸ್ಥಿತರಿದ್ದರು.