Advertisement

ಕೆಪಿಸಿಎಲ್‌ ನೌಕರರ ವೇತನ ಶೇ.26 ಹೆಚ್ಚಳ

06:50 AM Mar 03, 2018 | Team Udayavani |

ಶಿವಮೊಗ್ಗ: ರಾಜ್ಯ ವಿದ್ಯುತ್‌ ಪ್ರಸರಣ ನಿಗಮದ ನೌಕರರ ವೇತನವನ್ನು ಶೇ. 26ರಷ್ಟು ಹೆಚ್ಚಳ ಮಾಡಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಘೋಷಿಸಿದರು.

Advertisement

ವಿದ್ಯುತ್‌ ವಿತರಣಾ ಕೇಂದ್ರ ಶಿವಮೊಗ್ಗ ವಲಯ ಕಚೇರಿ ಮತ್ತು ಇತರ ಕಟ್ಟಡಗಳ ಉದ್ಘಾಟನೆ ಮತ್ತು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ರಾಜ್ಯ ವಿದ್ಯುತ್‌ ಪ್ರಸರಣ ನಿಗಮದ ನೌಕರರ ವೇತನವನ್ನು ಶೇ. 26ರಷ್ಟು ಹೆಚ್ಚಳ ಮಾಡಲಾಗಿದೆ. ಇಂಧನ ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ 23 ಸಾವಿರ ಖಾಲಿ ಇದ್ದ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇನ್ನು 17 ಸಾವಿರ ಹುದ್ದೆ ಖಾಲಿ ಇದ್ದು, ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next