Advertisement
ಸಿಸಿಬಿ ಕಚೇರಿಯಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಎಸಿಪಿ ರಾಮಚಂದ್ರಯ್ಯ ನೇತೃತ್ವದ ತಂಡ ತೀವ್ರ ವಿಚಾರಣೆಗೊಳಪಡಿಸಿದೆ. ವಿಚಾರಣೆ ವೇಳೆ ಅಲಿ ನೀಡಿರುವ ಕೆಲವು ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಶನಿವಾರವೂ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿ ಕಳುಹಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು.
ಬೆಟ್ಟಿಂಗ್ ಹಾಗೂ ಇತರ ತಂಡಗಳ ಜತೆಯೂ ಅವರು ನಿಕಟ ಸಂಪರ್ಕ ಹೊಂದಿದ್ದರು ಎಂಬ ಆರೋಪದ ಮೇರೆಗೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಪ್ರಕರಣ ಸಂಬಂಧ ಕೂಲಂಕಷ ತನಿಖೆಯ ಅಗತ್ಯವಿದ್ದು ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ( ಕೆಎಸ್‌ಸಿಎ) ಹಾಗೂ ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ದಳ ವಿಭಾಗದ ಸಹಕಾರ ಕೋರಲಾಗುವುದು ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಷ್ಟೇ ತನಿಖೆ ಆರಂಭಿಸಲಾಗಿದೆ. ಇದಲ್ಲದೆ, ಐಪಿಎಲ್, ತಮಿಳು ನಾಡು ಪ್ರೀಮಿಯರ್ ಲೀಗ್ ಸೇರಿದಂತೆ ಇತರ ಪಂದ್ಯಾವಳಿ ಗಳಲ್ಲಿಯೂ ಬೆಟ್ಟಿಂಗ್ ನಡೆದಿರುವ ಬಗ್ಗೆ ತನಿಖೆ ನಡೆಸಲಿದ್ದೇವೆ ಎಂದು ಅಧಿಕಾರಿಯೊಬ್ಬರು ಹೇಳಿದರು.
Related Articles
Advertisement
ಯಾರೀ ಅಲಿ?ಬೆಂಗಳೂರು ಮೂಲದ ಉದ್ಯಮಿ ಅಲಿ ಅಶ್ಫಾಕ್ ತಹ್ರಾ, ಅಲಿ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕರಾಗಿದ್ದಾರೆ. 2017ರಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡವನ್ನು ಖರೀದಿಸಿ ಮಾಲಕತ್ವ ತಮ್ಮದಾಗಿಸಿಕೊಂಡಿದ್ದರು. ಅದೇ ವರ್ಷ ಕೆಪಿಎಲ್ ಟೂರ್ನಿಯಲ್ಲಿ ಬೆಳಗಾವಿ ಪ್ಯಾಂಥರ್ಸ್ ಟ್ರೋಪಿ ಗೆದ್ದಿತ್ತು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದರು.