Advertisement

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

01:01 AM Nov 24, 2024 | Team Udayavani |

ಬೆಂಗಳೂರು: ರಾಜ್ಯದ 42 ಕರ್ನಾಟಕ ಪಬ್ಲಿಕ್‌ ಸ್ಕೂಲ್‌ (ಕೆಪಿಎಸ್‌) ಆಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿಯಾಗಿ ಎಲ್‌ಕೆಜಿ ತರಗತಿ ಮತ್ತು 51 ಕೆಪಿಎಸ್‌ ಶಾಲೆಗಳಲ್ಲಿ 1ನೇ ತರಗತಿಯ ಆಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿ ವಿಭಾಗಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

Advertisement

ರಾಜ್ಯದಲ್ಲಿ ಪ್ರಸ್ತುತ 286 ಕೆಪಿಎಸ್‌ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್‌ಕೆಜಿಯಿಂದ ದ್ವಿತೀಯ ಪಿಯು ತನಕ ಒಂದೇ ಕ್ಯಾಂಪಸ್‌ನಲ್ಲಿ ಶಿಕ್ಷಣ ನೀಡುತ್ತಿವೆ. ಕೆಪಿಎಸ್‌ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಉತ್ತಮವಾಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ತರಗತಿಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಹೆಚ್ಚುವರಿಯಾಗಿ 1ನೇ ತರಗತಿಯನ್ನು ಪ್ರಾರಂಭಿಸುವ ಶಾಲೆಗಳಲ್ಲಿ ಅವಶ್ಯವಿರುವ ಶಿಕ್ಷಕರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಮರು ನಿಯೋ ಜನೆಯ ಮೂಲಕ ತುಂಬಿಕೊಳ್ಳುವಂತೆ ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next