Advertisement

KPSC ವಿರೋಧಕ್ಕೆ ಸೊಪ್ಪು ಹಾಕಲಿಲ್ಲ: ನಾಡಿದ್ದೇ ಪರೀಕ್ಷೆ ನಡೆಸಲು ನಿರ್ಧಾರ

12:59 AM Aug 25, 2024 | Team Udayavani |

ಬೆಂಗಳೂರು: ಅಭ್ಯರ್ಥಿಗಳು ಹಾಗೂ ಸಾರ್ವಜನಿಕ ವಿರೋಧದ ನಡುವೆ ಮಂಗಳವಾರವೇ 384 ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಸಲು ಕೆಪಿಎಸ್‌ಸಿ ನಿರ್ಧರಿಸಿದ್ದು ಅಭ್ಯರ್ಥಿಗಳು ಹೋರಾಟದ ಹಾದಿ ಹಿಡಿದಿದ್ದಾರೆ.

Advertisement

ಪ್ರಮುಖವಾಗಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪ ಮಾಡಿರುವ ಅಭ್ಯರ್ಥಿಗಳು, ಮುಂದಿನ ರವಿವಾರ ಪರೀಕ್ಷೆ ನಿಗದಿಪಡಿಸಲು ಕೋರಿದರೂ ವ್ಯವಸ್ಥೆ ಮಾಡುತ್ತಿಲ್ಲ ಎಂದು ಆರೋಪಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಕುಳಿತಿದ್ದಾರೆ.

ಈ ಸಂಬಂಧ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸೇರಿ ಹಲವು ಮುಖಂಡರೂ ಪರೀಕ್ಷೆ ಮುಂದೂಡುವಂತೆ ಕೆಪಿಎಸ್‌ಸಿ ಹಾಗೂ ಸರಕಾರಕ್ಕೆ ಮನವಿ ಮಾಡಿದ್ದಾರೆ. ಆದರೆ ಇದ್ಯಾವುದಕ್ಕೂ ಸೊಪ್ಪು ಹಾಕದ ಸರಕಾರ ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ ಎಂದು ಕಡ್ಡಿ ತುಂಡಾದಂತೆ ಹೇಳಿದೆ. ನಿಗದಿಯಂತೆ ಆ. 27ರಂದು ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್‌ಸಿ ಕೂಡ ಸ್ಪಷ್ಟಪಡಿಸಿದೆ.

ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next