Advertisement

ಕರ್ನಾಟಕ ಲೋಕಸೇವಾ ಇಲಾಖೆ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

11:55 PM Jan 16, 2019 | |

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ 2018ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖೆಯ ವಿವಿಧ ವಿಷಯಗಳ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿದೆ. ಜ.19-21ರವರೆಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳು ಹಾಗೂ ದೆಹಲಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜ.22- 31ರವರೆಗೆ ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಫೆ.2- 7ರವರೆಗೆ ಬೆಂಗಳೂರು ಕೇಂದ್ರದಲ್ಲಿ ಮಾತ್ರ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು
//kpsc.kar.nic.in ಆಯೋಗದ ಜಾಲತಾಣದಲ್ಲಿ ಪ್ರವೇಶ ಪತ್ರ ಪಡೆಯಲು ಪ್ರಕಟಣೆ ತಿಳಿಸಿದೆ.
 

Advertisement
Advertisement

Udayavani is now on Telegram. Click here to join our channel and stay updated with the latest news.

Next