Advertisement

KPSC EXAM: ಮುಂದಿನ ಎರಡು ತಿಂಗಳೊಳಗೆ ಮರುಪರೀಕ್ಷೆ ನಡೆಸಿ: ಸಿದ್ದರಾಮಯ್ಯ

09:13 PM Sep 02, 2024 | Team Udayavani |

ಬೆಂಗಳೂರು: ಕೆಪಿಎಸ್‌ಸಿ(KPSC) ಗೆಜೆಟೆಡ್‌ ಪ್ರೊಬೆಷನರಿ (Gazetted Probationers) ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ತಿಳಿದ ಕೂಡಲೇ ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಕಾರಣಕ್ಕೆ  ಮುಂದಿನ ಎರಡು ತಿಂಗಳೊಳಗೆ ಮರುಪರೀಕ್ಷೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ  ಕೆಪಿಎಸ್‌ಸಿಗೆ ಸೂಚನೆ ನೀಡಿದ್ದಾರೆ.

Advertisement

ಆ.​ 27 ರಂದು ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ  350 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ತರ್ಜುಮೆ ದೋಷ ಕಂಡು ಬಂದಿದ್ದವು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೆಪಿಎಸ್​​ಸಿ ವಿರುದ್ಧ ಆಕ್ರೋಶ ವ್ಯಕ್ತವಾಗಿ ಪ್ರತಿಭಟನೆ, ಮರು ಪರೀಕ್ಷೆ ನಡೆಸಬೇಕೆಂಬ ಕೂಗು ಜೋರಾಯಿತು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ “ಎಕ್ಸ್‌” ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗುವಲ್ಲಿ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳ ಕೈಗೊಳ್ಳಲು ಸೂಚನೆ ನೀಡಲಾಗಿದೆ. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಹೇಳಿದ್ಧಾರೆ.

ಇದನ್ನು ಗಂಭೀರವಾಗಿ ಪರಿಗಣಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೆಪಿಎಸ್​ಇಯಿಂದ ವರದಿಯ ಕೇಳಿದೆ. ಈ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರಷೋತ್ತಮ ಬಿಳಿಮಲೆ ಮಾತನಾಡಿ, ಗ್ರಾಮೀಣ ಮಕ್ಕಳಿಗೆ ಉದ್ಯೋಗ ಸಿಗುವುದು ಬಹಳ ಕಷ್ಟ ಇದೆ. ಈ ಮಧ್ಯೆ ಕೆಪಿಎಸ್​ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ತಪ್ಪು ಮತ್ತಷ್ಟು ನೋವು ತಂದಿದೆ. ನಾವು ಈಗಾಗಲೇ ಕೆಪಿಎಸ್​ಸಿಗೆ ಪತ್ರ ಬರೆದಿದ್ದು, ಉತ್ತರವೂ ಬಂದಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next