Advertisement

ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ಇಲಾಖಾ ಪರೀಕ್ಷೆಗಳು ಮುಂದೂಡಿಕೆ

09:09 AM Apr 01, 2020 | Hari Prasad |

ಬೆಂಗಳೂರು: ರಾಷ್ಟ್ರಾದ್ಯಂತ ಕೋವಿಡ್ 19 ವೈರಸ್ ನಿರ್ಬಂಧ ಸಂಬಂಧಿತ ಲಾಕ್ ಡೌನ್ ಪರಿಸ್ಥಿತಿ ಇರುವುದರಿಂದ ಏಪ್ರಿಲ್ 11 ರಿಂದ ಮೇ 3ರವರೆಗೆ ಮೂರು ಹಂತಗಳಲ್ಲಿ ನಡೆಯಲು ನಿಗದಿಯಾಗಿದ್ದ ವಿವಿಧ ಇಲಾಖಾ ಪರೀಕ್ಷೆಗಳನ್ನು ಅನಿರ್ಧಷ್ಟಾವಧಿಗೆ ಮುಂದೂಡಿ ಕರ್ನಾಟಕ ಲೋಕಸೇವಾ ಆಯೋಗ ಇಂದು ಪ್ರಕಟನೆ ಹೊರಡಿಸಿದೆ.

Advertisement

ಹೊಸ ಪರೀಕ್ಷಾ ದಿನಾಂಕಗಳನ್ನು ಮುಂಬರುವ ದಿನಗಳಲ್ಲಿ ನಿಗದಿಪಡಿಸಿ ಆಯೋಗದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಈ ಮೊದಲು ಕಳೆದ ವರ್ಷ ಮಾರ್ಚ್ 31ರಂದು ಹೊರಡಿಸಿದ್ದ ಆಯೋಗದ ಅಧಿಸೂಚನೆಯಲ್ಲಿ 2020ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next