Advertisement

ಕೆಪಿಎಸ್‌ಸಿ ಅಧ್ಯಕ್ಷ ಶ್ಯಾಂ ಭಟ್‌ಗೆ ಗೌರವ ಡಾಕ್ಟರೇಟ್‌

11:47 AM Aug 11, 2017 | Team Udayavani |

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಶಾಮ್‌ ಭಟ್‌ ಅವರಿಗೆ ಗೌರವ ಡಾಕ್ಟರೇಟ್‌ ಪದವಿ ನೀಡಲಾಗಿದೆ. ಬೆಂಗಳೂರಿನ ಅಲಾಯನ್ಸ್‌ ವಿಶ್ವ ವಿದ್ಯಾಲಯ ಶಾಮ್‌ ಭಟ್‌ ಅವರು ಯಕ್ಷಗಾನ ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡಿರುವುದು ಹಾಗೂ ಸರ್ಕಾರಿ ಅಧಿಕಾರಿಯಾಗಿ 34 ವರ್ಷ ಉತ್ತಮ ಆಡಳಿತ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಗೌರವ ಡಾಕ್ಟರೇಟ್‌ ನೀಡಿದೆ.

Advertisement

 ಶನಿವಾರ ವಿಶ್ವ ವಿದ್ಯಾಲಯದ ಘಟಿಕೋತ್ಸವದಲ್ಲಿ ಭಾರತೀಯ ಸೇನಾ ಮುಖ್ಯಸ್ಥರು ಹಾಗೂ ರಾಜ್ಯಪಾಲ ವಜುಬಾಯಿ ವಾಲಾ ಶಾಮ್‌ ಭಟ್‌ ಅವರಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next