Advertisement

ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ-ಆರು ಮಂದಿ ಬಂಧನ

09:06 PM Jan 23, 2021 | Team Udayavani |

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಬೆಂಗಳೂರು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

Advertisement

ರಾಚಪ್ಪ ಮತ್ತು ಚಂದ್ರ ಹಾಗೂ ಇತರೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 24 ಲಕ್ಷ ರೂ. ನಗದು, ಮೂರು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಭಾನುವಾರ ರಾಜ್ಯದ್ಯಂತ ಪರೀಕ್ಷೆ ನಡೆಸಲಾಗಿತ್ತು. ಈ ಮಧ್ಯೆ ಆರೋಪಿಗಳು ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿ, ಪ್ರತಿ ಅಭ್ಯರ್ಥಿಯಿಂದ ಸುಮಾರು 1-2 ಲಕ್ಷ ರೂ. ಪಡೆದುಕೊಂಡಿದ್ದಾರೆ. ಬಳಿಕ ಬಹಿರಂಗವಾಗಿಯೂ ಮಾರಾಟ ಮಾಡಿದ್ದರು. ಈ ಖಚಿತ ಮಾಹಿತಿ ಮೇರೆಗೆ ಜ್ಞಾನ ಭಾರತಿ ಠಾಣಾ ವ್ಯಾಪ್ತಿಯ ಉಲ್ಲಾಳ ಬಳಿ ದಾಳಿ ನಡೆಸಿ ಪ್ರಶ್ನೆ ಪತ್ರಿಕೆಗಳ ಸಮೇತ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಇದನ್ನೂ ಓದಿ:ಮಂಡ್ಯ ಅಕ್ರಮ ಗಣಿಗಾರಿಕೆಗಳ ಮೇಲೆ ಪೊಲೀಸರ ದಾಳಿ : ಸ್ಫೋಟಕ ವಸ್ತುಗಳ ವಶ

Advertisement

Udayavani is now on Telegram. Click here to join our channel and stay updated with the latest news.

Next