Advertisement

ಕೆಪಿಎಸ್‌ಸಿ: ತಾತ್ಕಾಲಿಕ ಆಯ್ಕೆ ಪಟ್ಟಿ

09:25 AM Oct 06, 2017 | Team Udayavani |

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2016ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು (ಗ್ರೂಪ್‌ ಎ) ಮತ್ತು ಲೆಕ್ಕಪರಿಶೋಧನಾಧಿಕಾರಿ (ಗ್ರೂಪ್‌ ಬಿ) ವೃಂದದ ಒಟ್ಟು 162 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಆಯೋಗದ ವೆಬ್‌ಸೈಟ್‌ //kpsc.kar.nic.in/listನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಆಯ್ಕೆ ಪಟ್ಟಿ ಪ್ರಕಟಗೊಂಡ 7 ದಿನಗಳೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು – 01 ಇವರಿಗೆ ಸಲ್ಲಿಸಬಹುದು. ಕೊನೆಯ ದಿನಾಂಕದ ಅನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಆಯೋಗದ ಪ್ರಕಟನೆ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next