Advertisement
1971ರಲ್ಲಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ಭೂ ಸೇನಾ ನಿರ್ದೇಶನಾಲಯವು 1974 ಆಗಸ್ಟ್ 9ರಂದು ಕರ್ನಾಟಕ ಸರ್ಕಾರದ ಅಧೀನಕ್ಕೊಳಪಟ್ಟ ಸಂಸ್ಥೆಯಾಗಿ ಕರ್ನಾಟಕ ಭೂ ಸೇನಾ ನಿಗಮವಾಗಿ ಪರಿವರ್ತನೆ ಹೊಂದಿತು.ಕರ್ನಾಟಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ರಾಜ್ಯ ಸರಕಾರ ಹಮ್ಮಿಕೊಂಡಿರುವ ವಿವಿಧ ಯೋಜನೆಯಡಿ ಸಾವಿರಾರು ಕೋಟಿ ರೂ.ಗಳ ವೆಚ್ಚದಲ್ಲಿ ಅನೇಕ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ನಿರ್ವಹಣೆ ಮಾಡುತ್ತಾ ಬಂದಿದೆ.
ನಿಗಮವು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕೇಂದ್ರವಾಗಿ ಒಂದು ವಿಭಾಗ ಕಚೇರಿ, ಕಾರವಾರ- ಶಿರಸಿಯಲ್ಲಿ ತಲಾ ಒಂದು ಉಪ ವಿಭಾಗ ಹೊಂದಿದೆ. 2020-2021ರಲ್ಲಿ ಕಾರವಾರ ವಿಭಾಗದಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ, ಗ್ರಾಮೀಣ ಪ್ರದೇಶದ ರಸ್ತೆಗಳು, ಪಂಚಾಯತ್ ರಾಜ್ಯ ಇಲಾಖೆಯ 3054 ಯೋಜನೆಯಡಿ ವಿವಿಧ ಗ್ರಾಮಗಳಲ್ಲಿ ರಸ್ತೆ, ಜಿಲ್ಲೆಯ ವಿವಿಧ ತಾಲೂಕು ಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣ, ರೈತ ಸಂಪರ್ಕ ಕೇಂದ್ರ, ಪ್ರವಾಸೋದ್ಯಮ ಇಲಾಖೆಯ ಕಾಮಗಾರಿ, ಪಶು ವೈದ್ಯ ಚಿಕಿತ್ಸಾಲಯ ಕಟ್ಟಡ ನಿರ್ಮಾಣ ಸೇರಿದಂತೆ ಇತರೆ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಒಟ್ಟು 31.16 ಕೋಟಿ ರೂ.ಗಳ ಕಾಮಗಾರಿಗಳನ್ನು ನಿರ್ವಹಿಸಲಾಗಿರುತ್ತದೆ.