Advertisement

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

11:30 PM Dec 18, 2024 | Team Udayavani |

ಬೆಳಗಾವಿ: ರಾಜ್ಯದಲ್ಲಿ ಬಹು ಮಾಲಕತ್ವದ ಖಾಸಗಿ ಒಡೆತನದ ಪಹಣಿಗಳನ್ನು ಏಕವ್ಯಕ್ತಿ ಪಹಣಿಗಳನ್ನಾಗಿ ಮಾಡುವ ಉದ್ದೇಶದ ಪೋಡಿ ಮುಕ್ತ ಯೋಜನೆಯಡಿ ಈಗಾಗಲೇ 16,644 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳಾಗಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು.

Advertisement

ವಿಧಾನ ಪರಿಷ‌ತ್ತಿನಲ್ಲಿ ಬುಧವಾರ ಕಾಂಗ್ರೆಸ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಭೂ ಮಾಪನ ಇಲಾಖೆಯಲ್ಲಿ ಕಳೆದ 3 ವರ್ಷಗಳಲ್ಲಿ ವಿವಿಧ ರೀತಿಯ 6,62,825 ಪೋಡಿ ಅರ್ಜಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 5,33,545 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ಪ್ರಕರಣಗಳಲ್ಲಿನ ನ್ಯೂನತೆಗಳನ್ನು ಶೀಘ್ರವಾಗಿ ಸರಿಪಡಿಸಿಕೊಂಡು ಕಂದಾಯ ಹಾಗೂ ಭೂಮಾಪನ ಇಲಾಖೆಯ ನಡವಳಿಗಳೊಂದಿಗೆ ವಿಳಂಬವಿಲ್ಲದೆ ಪೋಡಿ ದುರಸ್ತಿ ಮಾಡಲಾಗುತ್ತಿದೆ. ಪೋಡಿಗೆ ಯೋಗ್ಯವಾಗಿರುವ ಪ್ರಕರಣಗಳನ್ನು 1 ತಿಂಗಳ ಅವಧಿಯಲ್ಲಿ ಪೂರೈಸಲಾಗುತ್ತಿದೆ ಎಂದರು.

ಹೆಚ್ಚಿನ ಪ್ರಕರಣಗಳು ಬಾಕಿ ಇರುವ ತಾಲೂಕುಗಳಿಗೆ ಕಡಿಮೆ ಪ್ರಕರಣಗಳು ಬಾಕಿ ಉಳಿದಿರುವ ತಾಲೂಕುಗಳ ಭೂ ಮಾಪಕ ರನ್ನು ನಿಯೋಜನೆ ಮಾಡಿ ಪ್ರಕರಣಗಳನ್ನು ವಿಲೇವಾರಿ ಮಾಡಲುಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಈ ಹಿಂದೆ, ಮ್ಯುಟೇಷ‌ನ್‌ ಪೋಡಿಯಂತಹ ಪ್ರಕ್ರಿಯೆಯನ್ನು ಪೂರೈಸಲು 4ರಿಂದ 6 ತಿಂಗಳವರೆಗೆ ಕಾಲಾವಕಾಶ ತೆಗೆದು
ಕೊಳ್ಳಲಾಗುತ್ತಿತ್ತು. ಆದರೆ, ನಮ್ಮ ಸರಕಾರವು ರೈತರಿಗೆ ಸಂಬಂಧ ಪಟ್ಟ ಇಂತಹ ಕೆಲಸಗಳಿಗೆ ಆದ್ಯತೆ ನೀಡಿ ಎಲ್ಲ ಹಂತಗಳ ಪ್ರಕ್ರಿಯೆಗಳನ್ನು ಸೂಕ್ತ ಮೂಲಭೂತ ಸೌಕರ್ಯಗಳನ್ನು ಒದಗಿ ಸುವ ಮೂಲಕ ಚುರುಕುಗೊಳಿಸಿದೆ ಎಂದು ಹೇಳಿದರು.

Advertisement

ಆಸ್ತಿ ಸಮೀಕ್ಷೆಗೆ ಸ್ವಮಿತ್ವ ಪ್ರಾರಂಭ
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸ್ವಮಿತ್ವ ಯೋಜನೆ (ಆಸ್ತಿ ಮೌಲ್ಯೀಕರಣಕ್ಕಾಗಿ ಗ್ರಾಮೀಣ ಭಾಗದಲ್ಲಿ ತಂತ್ರಜ್ಞಾನಾಧಾರಿತ ಸಮೀಕ್ಷೆ) ಆರಂಭಿಸಲಾಗಿದ್ದು, ಇದುವರೆಗೆ ಒಟ್ಟು 30,715 ಗ್ರಾಮಗಳ ಪೈಕಿ 15,142 ಗ್ರಾಮಗಳಲ್ಲಿ ಡ್ರೋನ್‌ ಹಾರಾಟ ಪ್ರಗತಿಯಲ್ಲಿದೆ. ಅದರಲ್ಲಿ 3,684 ಗ್ರಾಮಗಳಲ್ಲಿನ 9.9 ಲಕ್ಷ ಆಸ್ತಿದಾರರಿಗೆ ಸ್ವಮಿತ್ವ ಪಿಆರ್‌ ಕಾರ್ಡ್‌ ವಿತರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಧಾನಪರಿಷತ್‌ದಲ್ಲಿ ಬುಧವಾರ ಬಿಜೆಪಿ ಸದಸ್ಯ ಸುನೀಲ ವಲ್ಯಾಪುರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಈಗಾಗಲೇ 31 ತಾಲೂಕುಗಳಲ್ಲಿ ಆಸ್ತಿ ದಾಖಲೆಗಳ ಸ್ಕ್ಯಾನಿಂಗ್ ಮಾಡಿದ್ದು, ಜನವರಿಯಲ್ಲಿ ಆನ್‌ಲೈನ್‌ ಮೂಲಕ ಸಾರ್ವಜನಿಕ ಮುಕ್ತ ಮಾಡಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next