Advertisement

ಕೇಂದ್ರದ ವಿರುದ್ಧ ಕೃಷ್ಣ ಬೈರೇಗೌಡ ಅಸಮಾಧಾನ

11:32 PM Jun 26, 2019 | Lakshmi GovindaRaj |

ಬೆಂಗಳೂರು: 15ನೇ ಹಣಕಾಸು ಆಯೋಗದ ಐವರು ಸದಸ್ಯರಲ್ಲಿ ದಕ್ಷಿಣ ಭಾರತದ ಒಬ್ಬ ಸದಸ್ಯರೂ ಇಲ್ಲದಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಬೈರೇಗೌಡ ಅವರು ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್‌ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.

Advertisement

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಈ ಹಿಂದೆ ಹಣಕಾಸು ಆಯೋಗದಲ್ಲಿ ದಕ್ಷಿಣ ಭಾರತದ ಅನೇಕ ಸಮರ್ಥರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. 2015-20ರ ಅವಧಿಯಲ್ಲಿ ಕರ್ನಾಟಕಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದೆ. ರಾಜ್ಯದಲ್ಲಿನ ಬರ ಮತ್ತು ಪ್ರವಾಹ ಪರಿಹಾರವಾಗಿ ಎಸ್‌ಡಿಆರ್‌ಎಫ್ ನಿಧಿಯಿಂದ 1,527 ಕೋಟಿ ರೂ.ನೀಡಲಾಗಿದೆ. ಇದೇ ಅವಧಿಯಲ್ಲಿ ಮಹಾರಾಷ್ಟ್ರಕ್ಕೆ 8,195 ಕೋಟಿ ನೀಡಲಾಗಿದೆ.

ಆರ್ಥಿಕವಾಗಿ ಸದೃಢವಾಗಿ ಹೆಚ್ಚು ತೆರಿಗೆ ನೀಡುವ ದಕ್ಷಿಣದ ರಾಜ್ಯಗಳಿಗೆ ಆಗಿರುವ ಅನ್ಯಾಯ ಸರಿಪಡಿಸಲು 15ನೇ ಹಣಕಾಸು ಆಯೋಗದ ಸದಸ್ಯರು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ವಿಶ್ವಾಸ ಇದೆ. ದಕ್ಷಿಣ ರಾಜ್ಯಗಳ ಕಾರ್ಯಕ್ಷಮತೆ ಹಾಗೂ ದಕ್ಷತೆಗೆ ಕೇಂದ್ರ ಸರ್ಕಾರ ದಕ್ಷಿಣದ ರಾಜ್ಯಗಳಿಗೆ ದಂಡ ಹಾಕುವ ಬದಲು ಬಹುಮಾನ ನೀಡುತ್ತದೆ ಎಂಬ ವಿಶ್ವಾಸ ಇದೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next