Advertisement
ಮಧುರೆಯ ರಾಜನಾದ ಕಂಸ, ತನ್ನ ತಂಗಿ ದೇವಕಿಯ ವಿವಾಹದ ಅನಂತರ ಮೆರವಣಿಗೆಯಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ ಇವಳ 8ನೇ ಮಗನಿಂದ ನಿನಗೆ ಮರಣ ಬರಲಿದೆ ಎಂಬ ಅಶರೀರವಾಣಿಯೊಂದು ಕೇಳಿಸುತ್ತದೆ. ಇದರಿಂದ ಭಯಭೀತಗೊಂಡ ಕಂಸ ತಂಗಿ ಬಾವರನ್ನೇ ಕೊಲ್ಲಲು ಧಾವಿಸಿದಾಗ ದೇವಕಿ ಅಣ್ಣನ ಬಳಿ ಪತಿಯ ಜೀವ ಭಿಕ್ಷೆ ಬೇಡುತ್ತಾಳೆ.
Related Articles
Advertisement
ಇತ್ತ ನಂದಗೋಕುಲದಲ್ಲಿ ನಂದರಾಜನ ಮನೆಯಲ್ಲಿ ಆ ಹಸುಗೂಸು ಬೆಳೆಯುತ್ತಿರುತ್ತದೆ. ಕಂಸನು ಹರಿಯನ್ನು ಹರಣ ಗೈಯಲು ಬಗೆ ಬಗೆಯ ಪ್ರಯತ್ನ ಮಾಡಿದರೂ ಆತನ ಯಾವ ಪ್ರಯತ್ನವೂ ಸಫಲವಾಗುವುದಿಲ್ಲ. ಮುರಾರಿಯ ಬಾಲಲೀಲೆಗಳನ್ನು ವಿವರಿಸಲು ಪುಟಗಳು ಸಾಲದು. ಕೃಷ್ಣನು ಹಲವಾರು ರೀತಿಯಲ್ಲಿ ತನ್ನ ಬಾಲ ಲೀಲೆಗಳನ್ನು ತೋರಿಸುತ್ತಾ ಬೆಳೆಯುತ್ತಾನೆ. ಕೊನೆಗೆ ಈತನೇ ತನ್ನ ಮಾವನಾದ ಕಂಸನನ್ನು ವಧಿಸುತ್ತಾನೆ.
ಅಷ್ಟಮಿಯಂದು ಬೆಳಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು ಮಿಂದು ಶುಚಿಭೂìತನಾಗಿ ತಳಿರು, ತೋರಣ ಸಾರಣಾದಿಗಳಿಂದ ಮನೆಯನ್ನು ಸಿಂಗರಿಸಿ, ವ್ರತ ಸಂಕಲ್ಪ ಮಾಡಿ ಶ್ರೀಕೃಷ್ಣನ ಕಥಾಶ್ರವಣ ಮಾಡಿ ರಾತ್ರಿ ವಿಶೇಷ ಪೂಜೆ ಸಲ್ಲಿಸುವುದು ಈ ಹಬ್ಬದ ವೈಶಿಷ್ಟ್ಯ.
ಉಡುಪಿ, ಮಧುರಾ, ವೃಂದಾವನ, ಮುಂತಾದೆಡೆಗಳಲ್ಲಿ ಕೃಷ್ಣನ ಮೂರ್ತಿಯನ್ನು ಉಯ್ನಾಲೆಯಲ್ಲಿಟ್ಟು ಲಾಲಿ ಹಾಡಿ ತೂಗಲಾಗುವುದು. ಅನಂತರ ಕೃಷ್ಣನ ಜನ್ಮೋತ್ಸವವನ್ನು ಆಚರಿಸಿ ನಾಮಕರಣ, ಪೂಜೆ, ನೈವೇದ್ಯ, ಭಜನೆ ಮೊದಲಾದ ಕಾರ್ಯಕ್ರಮಗಳು ನಡೆಯುತ್ತದೆ. ಬೃಂದಾವನದಲ್ಲಿ ಇಂದಿಗೂ ಕೂಡ ಅಂದಿನ ಗೋಪಿಯರು ವರ್ತುಲಾಕಾರದಲ್ಲಿ ನರ್ತಿಸಿದಂತೆ ಹೆಣ್ಣು ಮಕ್ಕಳು ಶ್ರೀಕೃಷ್ಣನ ಮೂರ್ತಿಯ ಸುತ್ತಲೂ ಸುತ್ತುಗಟ್ಟಿ ನರ್ತಿಸುವುದು ಕಾಣಸಿಗುತ್ತದೆ.
ಹೀಗೆ ಜೀವನದ ಕಲುಷಿತ ಕಾಳರಾತ್ರಿಯಲ್ಲಿ ಎಲ್ಲರನ್ನೂ ಪವಿತ್ರಾತ್ಮರನ್ನಾಗಿ ಮಾಡುವ ಶ್ರೀಕೃಷ್ಣ ಜನ್ಮಾಷ್ಟಮಿ ಭಾರತದ ಎಲ್ಲ ಭಾಗಗಳಲ್ಲೂ ಆಚರಿಸಲ್ಪಡುವ ಜನಪ್ರಿಯ ಹಬ್ಬವಾಗಿದೆ.
ಎಲ್ಲರಿಗೂ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ಹಾರೈಕೆಗಳು.
ಕಾರ್ತಿಕ್ ಕುಮಾರ್ ಕೆ., ಕಡೆಕಲ್ಲು, ಏತಡ್ಕ