ಮಲ್ಪೆ: ಮಲ್ಪೆ ಸುವರ್ಣ ಕಲಾಶ್ರೀ ಯಕ್ಷ ಪ್ರಿಯರ ವತಿಯಿಂದ ಜೂ. 16ರಂದು ಪ್ರಶಸ್ತಿ ಪ್ರದಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯಿತು.
46 ವರ್ಷಗಳಿಂದ ವಿವಿಧ ಮೇಳಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕೃಷ್ಣ ಮೊಗವೀರ ಮೊಳಹಳ್ಳಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸುವರ್ಣ ಕಲಾಶ್ರೀ ಪ್ರಶಸ್ತಿಯೊಂದಿಗೆ ಚಿನ್ನದ ಉಂಗುರ ಮತ್ತು 10 ಸಾವಿರ ರೂ. ನೀಡಿ ಗೌರವಿಸಲಾಯಿತು.
ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ ಇದರ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಮಾತನಾಡಿ ವೈಶಿಷ್ಟé ಮತ್ತು ಸಂಪದ್ಭರಿತ ಸಾಹಿತ್ಯ ಹೊಂದಿರುವ ಯಕ್ಷಗಾನ ಕಲೆಯು ಜನರಲ್ಲಿ ಧಾರ್ಮಿಕ ನಂಬಿಕೆಯೊಂದಿಗೆ ಬೆಳೆದು ಬಂದಿದೆ. ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.
ಉಡುಪಿ ಜಿಲ್ಲೆ ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ವಿನಯ್ ಕುಮಾರ್, ಬಜೆ ಮೊಗವೀರ ಸುವರ್ಣ ನಾಗಬ್ರಹ್ಮ ಮೂಲಸ್ಥಾನದ ಅಧ್ಯಕ್ಷ ವೆಂಕಟರಮಣ ಕಿದಿಯೂರು, ಸಾಹಿತಿ ಪೂರ್ಣಿಮಾ ಜನಾರ್ದನ್ ಕೊಡವೂರು, ಸುವರ್ಣ ಕಲಾಶ್ರೀಯ ದಿನೇಶ್ ಸುವರ್ಣ ಕೊಡವೂರು, ವಿಲಾಸ್ ಎಸ್. ಸುವರ್ಣ, ಸದಾನಂದ ನಾಯ್ಕ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಲ್ಪೆ ಪರಿಸರದ ಎಸೆಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪುತ್ತೂರು ಧೀಶಕ್ತಿ ಮಹಿಳಾ ಯಕ್ಷ ಬಳಗದವರಿಂದ ಯಕ್ಷಗಾನ ತಾಳಮದ್ದಳೆ, ಮೊಗವೀರ ಕಲಾವಿದರಿಂದ ಯಕ್ಷ –
ನಾದ- ನೂಪುರ ಕಾರ್ಯಕ್ರಮ ಜರಗಿತು.