Advertisement

ಮಹಾ ಮಳೆಗೆ ತುಂಬಿದ ಕೃಷ್ಣೆ

12:15 PM Jun 19, 2020 | Suhan S |

ಬನಹಟ್ಟಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೊಯ್ನಾ ಜಲಾಶಯ ಹಾಗೂ ರಾಜಾಪುರ ಡ್ಯಾಂಗಳಿಂದ ಕೃಷ್ಣಾ ನದಿಗೆ ನೀರು ಹರಿದು ಬರುತ್ತಿದೆ.

Advertisement

ವಿಜಯಪುರ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯ ಅನೇಕ ನಗರ ಮತ್ತು ಗ್ರಾಮೀಣ ಪ್ರದೇಶಗಳ ಲಕ್ಷಾಂತರ ಸಂಖ್ಯೆಯ ಜನ-ಜಾನುವಾರುಗಳಿಗೆ ಹಿಪ್ಪರಗಿ ಜಲಾಶಯ ಸಂಜೀವಿನಿಯಾಗಿದ್ದು, ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಕೃಷ್ಣಾ ನದಿ ತುಂಬಿ ಹರಿಯುತ್ತಿರುವುದರಿಂದ ಅಕ್ಕ ಪಕ್ಕದ ಗ್ರಾಮಗಳ ಜನರು ಹಾಗೂ ರೈತರ ಮುಖದಲ್ಲಿ ಮತ್ತಷ್ಟು ಮಂದಹಾಸ ಮೂಡಿದೆ. ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಗುರುವಾರ ಹಿಪ್ಪರಗಿ ಜಲಾಶಯಕ್ಕೆ ಒಟ್ಟು 44,000 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಅದರಂತೆಯೇ ಜಲಾಶಯದಿಂದ 44,000 ಕ್ಯೂಸೆಕ್‌ ಪ್ರಮಾಣದ ನೀರು ಹರಿ ಬೀಡಲಾಗುತ್ತಿದ್ದು, ಜಲಾಶಯದ ನೀರಿನ ಮಟ್ಟ 521.60 ಮೀ. ಆಗಿದೆ ಎಂದು ರಬಕವಿ-ಬನಹಟ್ಟಿ ತಹಶೀಲ್ದಾರ್‌ ಪ್ರಶಾಂತ ಚನಗೊಂಡ ತಿಳಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next