ರತ್ನ ನೀಡುವಂತೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. 111 ವರ್ಷ ವಯಸ್ಸಿನ ಡಾ.ಶಿವಕುಮಾರ ಸ್ವಾಮೀಜಿಯವರು ಕಳೆದ ಎಂಟು ದಶಕಗಳಿಂದ ಸಮಾಜದ ಎಲ್ಲ ವರ್ಗದವರಿಗೆ ಸಾಮಾಜಿಕ, ಶೈಕ್ಷಣಿಕ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ, ಸಂಸ್ಕೃತ,ಇಂಗ್ಲೀಷ್ ಭಾಷೆಯಲ್ಲಿ ಪಾಂಡಿತ್ಯ ಹೊಂದಿರುವ ಅವರು ಸಾಮಾಜಿಕ ಪಿಡುಗುಗಳ ವಿರುದ್ಧ ನಿರಂತರ ಜಾಗೃತಿ ಮೂಡಿಸುತ್ತ ಬಂದಿದ್ದಾರೆ.
Advertisement
ಸ್ವಾಮೀಜಿಯವರ ಸಾಮಾಜಿಕ, ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದರೆ, ನಡೆದಾಡುವ ದೇವರು ಎಂದು ನಂಬಿರುವ ಅವರ ಲಕ್ಷಾಂತರ ಭಕ್ತರಿಗೆ ಹರ್ಷ ಉಂಟಾಗುತ್ತದೆ ಎಂದುಪ್ರಧಾನಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.