Advertisement

Krishna Upper Project ಅಚ್ಚುಕಟ್ಟು ಪ್ರದೇಶಗಳಿಗೆ ಡಿ.10ರವರೆಗೂ ನೀರು: ಆರ್.ಬಿ ತಿಮ್ಮಾಪೂರ

12:10 PM Oct 12, 2023 | Team Udayavani |

ಬೆಂಗಳೂರು: ಜಲಾಶಯಕ್ಕೆ ಒಳಹರಿವು ಬಂದಿರುವುದರಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್.ಬಿ. ತಿಮ್ಮಾಪೂರ ಅವರು ತಿಳಿಸಿದ್ದಾರೆ.

Advertisement

ಜಲಾಶಯಕ್ಕೆ ಒಳ ಹರಿವು ಬಂದಿರುವುದರಿಂದ ಚಾಲು-ಬಂದ್ ಪದ್ದತಿಯನ್ನು ಪರಿಷ್ಕರಿಸಿ 14 ದಿನ ನೀರು ಚಾಲು ಹಾಗೂ 10 ದಿನದ ಬದಲಿಗೆ 8 ದಿನ ಮಾತ್ರ ಬಂದ್ ಪದ್ದತಿಯನ್ನು ಅನುಸರಿಸಿ ಅ. 17ರ ಬದಲಿಗೆ ಅ. 14ರಿಂದಲೇ ನೀರು ಚಾಲು ಮಾಡಲು ತೀರ್ಮಾನಿಸಲಾಗಿದೆ. ಅಲ್ಲದೇ ಮುಂಗಾರು ಹಂಗಾಮಿಗೆ ನ.23 ರವರೆಗೂ ನೀರು ಹರಿಸಲು ಕೈಗೊಂಡಿದ್ದ ನಿರ್ಣಯದ ಬದಲಾಗಿ ಡಿ. 10 ರವರೆಗೂ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿಗಾಗಿ ನೀರು ಹರಿಸುವುದನ್ನು ಮುಖ್ಯಮಂತ್ರಿಗಳ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ರೈತರ ಹಿತ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಬಾಗಲಕೋಟೆ, ವಿಜಯಪುರ, ಕಲಬುರಗಿ,ಯಾದಗಿರಿ, ರಾಯಚೂರು ಜಿಲ್ಲೆಗಳ ಸುಮಾರು 6 ಲಕ್ಷ ಬೆಕ್ ಪ್ರದೇಶದ ರೈತರಿಗೆ ಅನುಕೂಲವಾಗಲಿದೆ ಎಂದು ಸಚಿವ ಆರ್.ಬಿ. ತಿಮ್ಮಾಪೂರ ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next