Advertisement
ಮೇ 19ರಂದು ದೋಹಾ ಕತಾರ್‌ನಲ್ಲಿ ನಡೆ ಯುವ ತುಳುಕೂಟ ವಾರ್ಷಿಕೋತ್ಸವದಲ್ಲಿ ಪೂಂಜಾ ಈ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಇದೇ ಸಂದರ್ಭ ಹರೇಕಳ ಹಾಜಬ್ಬ, ಸುನೀಲ್ ಡಿ’ಸೋಜಾ ಅವರು ಕೂಡ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಯನ್ ಕಲ್ಚರಲ್ ಸೆಂಟರ್‌ನ ಅಧ್ಯಕ್ಷೆ ಮಿಲನ್ ಅರುಣ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕೃಷ್ಣಕುಮಾರ್ ಪೂಂಜಾ ಅವರು ಸೇವಾಂಜಲಿ ಪ್ರತಿಷ್ಠಾನದ ಮೂಲಕ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರ ನಡೆಸಿಕೊಂಡು ಬರುತ್ತಿದ್ದಾರೆ. ಉಚಿತ ವೈದ್ಯಕೀಯ ಶಿಬಿರ, ರಕ್ತದಾನ ಶಿಬಿರ, ನೇತ್ರ, ದಂತ ಚಿಕಿತ್ಸಾ ಶಿಬಿರವನ್ನು ದಾಖಲೆ ಸಂಖ್ಯೆಯಲ್ಲಿ ಸಂಘಟಿಸಿದ್ದಾರೆ. ಇವರ ಸಾಧನೆಗೆ ಈಗಾಗಲೇ ಸೇವಾರತ್ನ ಪ್ರಶಸ್ತಿ, ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ವಿಶ್ವೇಶ್ವರಯ್ಯ ದಶಮಾನೋತ್ಸವ ಪ್ರಶಸ್ತಿ, ಇಂದಿರಾ ಗಾಂಧಿ ಸದ್ಭಾವನ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಸಮ್ಮಾನಗಳು ದೊರಕಿವೆ.