Advertisement

Sandalwood: ಆ. 15ಕ್ಕೆ ಕೃಷ್ಣಂ ಪ್ರಣಯ ಸಖಿ ತೆರೆಗೆ

02:17 PM Jun 25, 2024 | Team Udayavani |

ಗಣೇಶ್‌ ನಾಯಕರಾಗಿ ನಟಿಸುತ್ತಿರುವ “ಕೃಷ್ಣಂ ಪ್ರಣಯ ಸಖೀ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಆಗಸ್ಟ್‌ 15ರಂದು ತೆರೆಕಾಣುತ್ತಿದೆ. ಪ್ರಶಾಂತ್‌ ಜಿ ರುದ್ರಪ್ಪ ನಿರ್ಮಿಸಿರುವ ಈ ಚಿತ್ರವನ್ನು ಶ್ರೀನಿವಾಸರಾಜು ನಿರ್ದೇಶನ ಮಾಡಿದ್ದಾರೆ.

Advertisement

ಇತ್ತೀಚೆಗೆ ಚಿತ್ರದ ಚಿನ್ನಮ್ಮ ಹಾಡು ಮಂತ್ರಿ ಮಾಲ್‌ ನಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಯಾಯಿತು. ನಟ ಶಶಿಕುಮಾರ್‌ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಶಶಿಕುಮಾರ್‌ ಕೂಡಾ ನಟಿಸಿದ್ದಾರೆ. ನಿರ್ದೇಶಕ ಶ್ರೀನಿವಾಸರಾಜು ಮಾತನಾಡಿ, “ನಮ್ಮ ಚಿತ್ರದಲ್ಲಿ ಅರ್ಜುನ್‌ ಜನ್ಯ ಅವರು ಸಂಗೀತ ಸಂಯೋಜಿಸಿರುವ ಒಟ್ಟು ಏಳು ಹಾಡುಗಳಿದೆ. ಆ ಪೈಕಿ ಎರಡನೇ ಹಾಡು ಇಂದು ಬಿಡುಗಡೆಯಾಗಿದೆ. ಮೈಸೂರಿನಲ್ಲಿ ಬಿಡುಗಡೆಯಾದ ಮೊದಲ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿ, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈ ಚಿನ್ನಮ್ಮ ಹಾಡು ಕೂಡ ಎಲ್ಲರಿಗೂ ಪ್ರಿಯವಾಗಲಿದೆ’ ಎಂದರು.

“ನಾನು ಬಹಳ ಇಷ್ಟಪಡುವ ಗೀತರಚನೆಕಾರರಾದ ಕವಿರಾಜ್‌ ಅವರು ಬರೆದಿರುವ ಚಿನ್ನಮ್ಮ ಹಾಡು ತುಂಬಾ ಚೆನ್ನಾಗಿದೆ. ಅರ್ಜುನ್‌ ಜನ್ಯ ಅವರ ಸಂಗೀತ, ಕೈಲಾಶ್‌ ಖೇರ್‌ ಹಾಗೂ ಇಂದು ನಾಗರಾಜ್‌ ಅವರ ಗಾಯನ ಮತ್ತು ಶೇಖರ್‌ ಮಾಸ್ಟರ್‌ ಅವರ ನೃತ್ಯ ನಿರ್ದೇಶನ ಹಾಗೂ ವೆಂಕಟ್‌ ರಾಮಪ್ರಸಾದ್‌ ಅವರ ಛಾಯಾಗ್ರಹಣ ಎಲ್ಲವೂ ಸೊಗಸಾಗಿದೆ. ಈ ಹಾಡು ಚಿತ್ರೀಕರಣವಾದ ಜಾಗ ಕೂಡ ಅದ್ಭುತವಾಗಿದೆ. ಈ ಚಿತ್ರದಲ್ಲಿ ಹಿರಿಯ ನಟ ಶಶಿಕುಮಾರ್‌ ಅವರ ಜೊತೆ ನಟಿಸಿದ್ದು ಖುಷಿಯಾಗಿದೆ’ ಎನ್ನುವುದು ನಟ ಗಣೇಶ್‌ ಅವರ ಮಾತು.

ಚಿತ್ರತಂಡದ ಸದಸ್ಯರ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವುದಾಗಿ ನಿರ್ಮಾಪಕ ಪ್ರಶಾಂತ್‌ ಜಿ ರುದ್ರಪ್ಪ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next