Advertisement
ಕಾರವಾರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೆಆರ್ ಎಸ್ ಸ್ಥಾಪನೆಯಾಗಿ 4 ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ನಾವು ಪಕ್ಷ ಬಲಪಡಿಸಲು ಸಜ್ಜಾಗಿದ್ದೇವೆ. ಸದ್ಯ ಅಧಿಕಾರದಲ್ಲಿರುವ ಕಾಂಗ್ರೆಸ್ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಜಾರಿಗೆ ಮಾಡಿರುವುದನ್ನು ಕೆಆರ್ ಎಸ್ ಪಕ್ಷ ಸ್ವಾಗತಿಸುತ್ತದೆ ಎಂದರು.
Related Articles
Advertisement
ಹಿಂದಿ ಹೇರಿಕೆ ಬೇಡ: ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಹಿಂದಿ ಹೇರುತ್ತಿದೆ. ಇದನ್ನು ನಾವು ವಿರೋಧಿಸುತ್ತೇವೆ. ರಾಜ್ಯಗಳ ಜೊತೆ ಕೇಂದ್ರ ಪ್ರಜಾಸತ್ತಾತ್ಮಕವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಕೆಆರ್ ಎಸ್ ಜಿಲ್ಲಾ ಉಪಾಧ್ಯಕ್ಷ ವಿನಾಯಕ ಎಂ.ನಾಯ್ಕ ಆರೋಪಿಸಿದರು. ಕೇಂದ್ರ ಸರ್ಕಾರ ಜನ ವಿರೋಧಿಯಾಗಿದೆ ಎಂದು ಅವರು ಅಪಾದಿಸಿದರು.
ಇತ್ತಿಚಿನ ದಿನಗಳಲ್ಲಿ ಒಕ್ಕೂಟ ವ್ಯವಸ್ಥೆಯನ್ನು ಕೇಂದ್ರದ ಬಿಜೆಪಿ ಮೊಟಕು ಗೊಳಿಸುತ್ತಿದೆ. ರಾಜ್ಯಗಳ ಅಧಿಕಾರವನ್ನು ಕಿಕಿತ್ತುಕೊಳ್ಳಲಾಗುತ್ತಿದೆ. ಚುನಾವಣಾ ಆಯೋಗವನ್ನು ದುರ್ಬಲಗೊಳಿಸಲಾಗುತ್ತಿದೆ. ಹಣ, ತೋಳ್ಬಲ ಇದ್ದವರು ಚುನಾವಣೆಗೆ ನಿಂತು ಗೆಲ್ಲುತ್ತಿದ್ದಾರೆ. ನ್ಯಾಯ ಸಮ್ಮತ ಚುನಾವಣೆ ನಡೆಯುವಂತೆ ಚುನಾವಣಾ ಆಯೋಗ ನೋಡಿಕೊಳ್ಳಬೇಕು ಎಂದು ವಿನಾಯಕ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಫಕೀರ್ ಸಾಳುಂಕೆ, ಸಂದೀಪ ನಾಯ್ಕ, ಗಣಪತಿ ನಾಯ್ಕ ಉಪಸ್ಥಿತರಿದ್ದರು.